ಏ. 29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ :- ಜಿಲ್ಲೆಯಲ್ಲಿ ಏ. 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಶಿವಮೊಗ್ಗದ 2 ಮತ್ತು ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲ್ಲೂಕುಗಳಲ್ಲಿನ 1 ಪರೀಕ್ಷಾ ಕೇಂದ್ರ ಸೇರಿ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 3531 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮೇ 16 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜರಿಗೊಳಿಸಿ ಆದೇಶಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಖಜನಾಧಿಕಾರಿ ಸಾವಿತ್ರಿ, ಪ್ರಭಾರ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಹಾಗೂ ಅಧಿಕಾರಿಗಳಿದ್ದರು.

Abhi

Abhi

Leave a Reply

Your email address will not be published. Required fields are marked *