
ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ದಾಖಲಿಸಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಂತರ್ಜಾಲ ತಾಣ htpps://swd.karnataka.gov.in ರಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಹಾಗೂ ದಾಖಲೆಗಳನ್ನು ಉಪನಿರ್ದೇಶಕರು ಹಾಗೂ ಎಲ್ಲಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಮೇ ೩ ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ದೂ. 08182-249241ರಲ್ಲಿ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವುದು.
