google.com, pub-9939191130407836, DIRECT, f08c47fec0942fa0

ಬೆಂಗಳೂರು :- ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ.

ಅದರ ಪ್ರಕಾರ ೫ ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು.

ಎಲ್ ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ಆಗಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್‌ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿದೆ. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಯ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು.

ಅಂದ್ರೆ 5 ವರ್ಷ 5ತಿಂಗಳು ಇರುವ ಮಕ್ಕಳಿಗೆ ಈ ವರ್ಷ 1ನೇ ತರಗತಿ ನೋಂದಣಿಗೆ ಅವಕಾಶ ಮಾಡಲಾಗುತ್ತಿದೆ. 1ನೇ ತರಗತಿಯ ಅಡ್ಮಿಷನ್ ಜೊತೆಗೆ ಎಲ್ ಕೆಜಿ ಪ್ರವೇಶ ಪಡೆಯುವ ಮಕ್ಕಳಿಗೆ 4ವರ್ಷ ವಯೋಮಿತಿ ನಿಗದಿಪಡಿಸಲಾಗುತ್ತಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗೊಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *