
ಶಿವಮೊಗ್ಗ :- ಭಯೋತ್ಪಾದಕತೆ ತಡೆಯಲು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಉಳಿಸಲು ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ಹೊರಹಾಕಿದರು.
ಮೊನ್ನೆಯ ಭಯೋತ್ಪಾದಕ ಘಟನೆಯಿಂದ ಇಡೀ ಭಾರತೀಯರ ಮನ ಮಿಡಿದಿದೆ. ಭಯೋತ್ಪಾದಕತೆಯ ಅಟ್ಟಹಾಸ ಇನ್ನೂ ಎಷ್ಟುದಿನ ಎನ್ನುವ ಆತಂಕವೂ ಮನೆ ಮಾಡಿದೆ. ಶಿವಮೊಗ್ಗ ಮಂಜುನಾಥ್ ರಾವ್ ಸೇರಿದಂತೆ ಸುಮಾರು ೨೮ ಅಮಾಯಕರು ಈ ದಾಳಿಗೆ ಬಲಿಯಾಗಿದ್ದಾರೆ. ಇಡೀ ದೇಶ ಒಟ್ಟಾಗಿ ಇದನ್ನು ಖಂಡಿಸುತ್ತಿದೆ ಎಂದರು.
ಪಾಕಿಸ್ತಾನಕ್ಕೆ ಬಾಂಬ್ ಹಾಕಿ, ಭಾರತಕ್ಕೆ ಹೂ ಹಾಕಿ ಎಂಬ ಘೋಷಣೆ ಘೋಷಣೆಯಾಗೇ ಉಳಿಯದೆ ಕಾರ್ಯರೂಪಕ್ಕೆ ಬರಬೇಕು. ಈ ವಿಷಯದಲ್ಲಿ ಈಗಾಗಲೇ ಪ್ರಧಾನಿ ಮೋದಿ ಅವರು ದೃಢ ನಿರ್ಧಾ ತೆಗೆದುಕೊಂಡಿದ್ದಾರೆ. ಮೋದಿ ಮತ್ತು ಅಮಿತ್ ಷಾ ಅವರಲ್ಲಿ ನಾನು ಮನವಿ ಮಾಡುತ್ತೇನೆ, ಪಾಕಿಸ್ತಾನ ಸರ್ವ ನಾಶ ಆಗದ ಹೊರತು ಭಾರತ ಉಳಿಯುವುದಿಲ್ಲ. ಭಾರತದಲ್ಲಿ ಮಾತ್ರ ಹಿಂದೂಗಳಿದ್ದಾರೆ. ಇದು ಹಿಂದೂ ರಾಷ್ಟ್ರವಾಗಿಯೇ ಉಳಿಯಬೇಕಾಗಿದೆ. ಯುದ್ಧ ಸಾರುವುದೇ ಏಕೈಕ ದಾರಿ ಎಂದರು.
ಕಾಂಗ್ರೆಸ್ ಪಕ್ಷದವರು ಓಲೈಕೆಯ ಮಾನಸಿಕತೆಯಿಂದ ಇನ್ನೂ ಹೊರಬಂದಿಲ್ಲ. ಒಂದು ಕಡೆ ಕೇಂದ್ರ ಸರ್ಕಾರದ ಜೊತೆಗೆ ನಾವು ಇದ್ದೇವೆ ಎಂದು ಹೇಳುವು ನಾಯಕರು, ಮತ್ತೊಂಡು ಕಡೆ ಭದ್ರತೆಯ ಬಗ್ಗೆ ಅಪಸ್ವರ ಎತ್ತುತ್ತಾರೆ. ರಾಬರ್ಟ್ ವಾದ್ರಾನಂತವರು ಉಗ್ರಗಾಮಿಗಳಿಗೆ ಶಕ್ತಿ ನೀಡುವಂತಹ ಹೇಳಿಕೆ ಕೊಡುತ್ತಿದ್ದಾರೆ ಎಂದು ಖಂಡಿಸಿದರು.
ಪ್ರಧಾನಿ ಮೋದಿ ಅವರು ಜಗತ್ತು ಮೆಚ್ಚುವ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪಾಕಿಸ್ತಾನಿಯರ ಎಲ್ಲಾ ವೀಸಾಗಳನ್ನು ರದ್ದು ಮಾಡಲಾಗಿದೆ. ಸಿಂಧೂ ನದಿಯ ನೀರು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿರುವ ಪಾಕಿಸ್ತಾನಿಗಳನ್ನು ಜಗ ಬಿಡುವಂತೆ ತಿಳಿಸಿದ್ದಾರೆ. ವಾಯು ಮಾರ್ಗ ಬಂದ್ ಆಗಿದೆ. ಒಟ್ಟಾರೆ ಪಾಕಿಸ್ತಾನದ ವಿರುದ್ಧ ಭಾರತ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಎನ್.ಜೆ. ನಾಗರಾಜ್, ಜಗದೀಶ್, ಜನೇಶ್ವರ್, ಮೋಹನ್ ರೆಡ್ಡಿ, ಮಂಜುನಾಥ್ ನವಿಲೆ, ದೀನದಯಾಳ್, ಶ್ರೀನಾಗ್ ಇದ್ದರು.
