google.com, pub-9939191130407836, DIRECT, f08c47fec0942fa0

ಮಂಗಳೂರು :- ರಾಜ್ಯದ ಕರಾವಳಿ ಪ್ರದೇಶದಲ್ಲಿ ಸತತ ಮೂರನೇ ದಿನವಾದ ಸೋಮ ವಾರವೂ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶದಾದ್ಯಂತ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳವರೆಗೆ ರೆಡ್ ಅಲರ್ಟ್ ಜರಿಯಲ್ಲಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮಂಗಳೂರು ನಗರದ ಹಲವಾರು ಭಾಗಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಜಿಲ್ಲೆಯಾದ್ಯಂತ ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣಪುಟ್ಟ ಭೂಕುಸಿತಗಳು ಸಂಭವಿಸಿವೆ.

ಮಂಗಳೂರು ನಗರದ ಕೊಟ್ಟಾರ ಜಂಕ್ಷನ್, ಮಾಲೆಮಾರ್, ಮಹಾ ವೀರ ವೃತ್ತ ಜವಾವೃತಗೊಂಡಿದ್ದು, ಉರ್ವ, ಮಟಡಕಣಿ, ಕುದ್ರೋಳಿ ಮತ್ತು ಕೊಡಿಯಾಲ್‌ಬೈಲ್ (ಪಶ್ಚಿಮ) ಗಳಲ್ಲಿ ಸಣ್ಣ ಪ್ರಮಾಣದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತೊಕ್ಕುಟ್ಟು, ಗೂಡಿನಬಳಿ, ಮರಕಡ, ಪಣಂಬೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳೂ ಜಲಾವೃತಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯ ಹಂಗಾಮಿ ಜಿಲ್ಲಾಧಿಕಾರಿ ಆನಂದ್ ಕೆ, ಇಂದು ಬೆಳಿಗ್ಗೆ ನಿರಂತರ ಮಳೆಯಿಂದಾಗಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತದ ಪ್ರಕಾರ, ಕಳೆದ ೨೪ ಗಂಟೆಗಳಲ್ಲಿ ಹಲವು ಪ್ರದೇಶಗಳಲ್ಲಿ ೧೫೦ ಮಿಮೀ ಮಳೆಯಾಗಿದ್ದು, ಸುಳ್ಯದ ಬೆಳ್ಳಾರೆಯಲ್ಲಿ ಅತಿ ಹೆಚ್ಚು 200.5 ಮಿಮೀ ಮಳೆಯಾಗಿದೆ. ಬಂಟ್ವಾಳದ ಸಾರಪಾಡಿ ಮತ್ತು ಪುತ್ತೂರಿನ ಬೆಳಂದೂರಿನಲ್ಲಿ ತಲಾ 190 ಮಿ.ಮೀ. ಮಳೆಯಾಗಿದೆ.
ಪರಿಸ್ಥಿತಿ ಹದಗೆಡುತ್ತಿರುವುದ ರಿಂದ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಒಂದು ತಂಡವನ್ನು ಪುತ್ತೂರಿನಲ್ಲಿ ನಿಯೋಜಿಸಲಾಗಿದ್ದು, ಮಂಗಳೂರು ಮತ್ತು ಸುಬ್ರಹ್ಮಣ್ಯದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ಎರಡು ತಂಡಗಳನ್ನು ನಿಯೋಜಿಸಲಾಗಿದೆ.

ಅಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾ ಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳು ವಂತೆ ಸೂಚನೆ ನೀಡಲಾಗಿದೆ. ಜೆಸಿಬಿಗಳು ಮತ್ತು ರಕ್ಷಣಾ ದೋಣಿಗಳಂತಹ ನಿರ್ಮಾಣ ಸಲಕರಣೆಗಳನ್ನು ಸಿದ್ಧವಾಗಿಡ ಲಾಗಿದೆ. ದುರ್ಬಲಗೊಂಡ ಕಟ್ಟಡಗಳಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳನ್ನು ಪುನಃ ತೆರೆಯುವ ಮೊದಲು ತೆರವುಗೊಳಿಸಲಾಗುತ್ತಿದೆ.

ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆ:

ಕುಮಟಾ ಬಳಿಯ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಕುಸಿತಗಳು ವರದಿಯಾಗಿವೆ. ಬೆಳ್ತಂಗಡಿ ಸುತ್ತಮುತ್ತಲಿನ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದ್ದು, ತಗ್ಗು ಪ್ರದೇಶಗಳಿಗೆ ಪ್ರವಾಹದ ಅಪಾಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆದ್ದಾರಿ ನಿರ್ಮಾಣ ಕಾರ್ಯ ಗಳಿಂದಾಗಿ ವಸತಿ ಪ್ರದೇಶಗಳಲ್ಲಿ ನೀರು ನುಗ್ಗಿರುವ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅಧಿಕಾರಿಗಳು ಕೋರಿದ್ದಾರೆ. ಈಮಧ್ಯೆ, ಮಳೆಗೂ ಮುನ್ನ ಹೊರಟಿದ್ದ ಮೀನುಗಾರಿಕಾ ದೋಣಿಗಳು ಪ್ರತಿಕೂಲ ಪರಿಸ್ಥಿತಿ ಯಿಂದಾಗಿ ನವ ಮಂಗಳೂರು ಬಂದರಿಗೆ ಹಿಂತಿರುಗುತ್ತಿವೆ.

Leave a Reply

Your email address will not be published. Required fields are marked *