google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು.

ಇಂದು ದಲಿತ ಸಂಘರ್ಷ ರಾಜ್ಯ ಸಮಿತಿ (ಬಿ.ಕೃಷ್ಣಪ್ಪ ವಾದ) ಮತ್ತು ದಲಿತ ನೌಕರರ ಒಕ್ಕೂಟ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಪ್ರೊ.ಬಿ.ಕೃಷ್ಣಪ್ಪನವರ ೮೭ನೇ ಜನ್ಮದಿನ ಮತ್ತು ರಾಜ್ಯಮಟ್ಟದ ದ.ಸಂ.ಸ. ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪ್ರೊ.ಕೃಷ್ಣಪ್ಪ ಅವರು ಅಂಬೇಡ್ಕರ್ ಆಲೋಚನೆಗಳನ್ನೇ ಮುಂದಿಟ್ಟುಕೊಂಡು ಶಿಕ್ಷಣ ಸಂಘಟನೆ ಹೋರಾಟದ ದಸಂಸ ಅನ್ನು ಕಟ್ಟಿದರು. ಆ ಮೂಲಕ ಸಮ ಸಮಾಜದ ಹೋರಾಟಗಳನ್ನು ನಡೆಸುತ್ತಾ ಬಂದರು. ಅವರು ನಾನು ಹೋರಾಟದ ಹಣತ್ನೆ ಹಚ್ಚಿದ್ದೇನೆ. ಅದು ಆರದಂತೆ ನೋಡಿಕೊಳ್ಳಿ ಎಂದಿದ್ದರು. ಹಾಗಾಗಿ ದಲಿತ ಸಂಘರ್ಷ ಸಮಿತಿಗಳು ತಮ್ಮ ಹೋರಾಟಗಳನ್ನು ಮುಂದುವರಿಸ ಬೇಕು ಮತ್ತು ಗಟ್ಟಿ ನಿಲುವುಗಳನ್ನು ತೆಗೆದುಕೊಳ್ಳಬೇಕು ಎಂದರು.

ಡಾ. ಅಂಬೇಡ್ಕರ್‌ರವರು ಈ ದೇಶದ ದಲಿತರ ಬೆಳಕಾಗಿದ್ದಾರೆ. ಅವರು ಕೊಟ್ಟ ಸಂವಿಧಾನ ಇಂದು ಎಲ್ಲಾ ಧರ್ಮಗಳಿಗೂ ಪವಿತ್ರ ಗ್ರಂಥವೇ ಆಗಿದೆ. ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಅಂಬೇಡ್ಕರ್‌ರವರ ಚಿಂತನೆ ಮತ್ತು ವಿಚಾರಗಳನ್ನು ಇಟ್ಟುಕೊಂಡು ಸಂಘಟನೆ ಮತ್ತು ಶಿಕ್ಷಣದ ಮೂಲಕ ತಮ್ಮ ಹೋರಾಟಗಳನ್ನು ವಿಸ್ತರಿಸಬೇಕು ಮತ್ತು ದಲಿತ ಪ್ರeಯನ್ನು ಬೆಳೆಸಬೇಕು ಎಂದರು. ಕರ್ನಾಟಕ ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಬಿ.ಎಲ್. ರಾಜು ಮಾತನಾಡಿ, ದಲಿತರು ಸ್ವಾತಂತ್ರ್ಯ ಪೂರ್ವದಿಂದಲೂ ಸ್ವಾತಂತ್ರ್ಯ ನಂತರವೂ ಭೂಮಿಗಾಗಿಯೇ ಹೋರಾಟ ನಡೆಸುತ್ತಾ ಬಂದಿದ್ದಾರೆ. ಪ್ರೊ.ಬಿ. ಕೃಷ್ಣಪ್ಪ ಅವರು ಕೂಡ ದಲಿತರಿಗೆ ಭೂಮಿ ಬೇಕು ಎಂಬ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿಯನ್ನು ಕಟ್ಟಿದರು. ಆದರೆ ಇಂದೂ ಕೂಡ ದಲಿತರು ಅದೇ ಪ್ರಶ್ನೆಯನ್ನು ಇಟ್ಟು ಕೊಂಡು ಹೋರಾಟ ಮಾಡಬೇಕಾದ ಅನಿವಾರ್‍ಯತೆ ಇರುವುದು ಅತ್ಯಂತ ದುರದೃಷ್ಟಕರ ಎಂದರು.

ಅಧ್ಯಕ್ಷತೆ ವಹಿಸಿದ್ದ ದಸಂಸನ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪ ಅವರು ನಾಡಿನ ಉದ್ದಗಲಕ್ಕೂ ದಲಿತರಿಗೆ ಸಿಗಬೇಕಾದ ಭೂಮಿ, ವಸತಿ, ನಿವೇಶನ, ಸವಲತ್ತು, ಸಮಾನತೆ ಮತ್ತು ಸಾಮಾಜಿಕ ರಕ್ಷಣೆಗಾಗಿ ನೂರಾರು ಹೋರಾಟಗಳನ್ನು ಮಾಡಿಕೊಂಡು ಬಂದವರು. ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿದವರು. ಅವರ ತತ್ವಗಳನ್ನೇ ಇಟ್ಟುಕೊಂಡು ಅಂಬೇಡ್ಕರ್‌ರವರ ಮಾರ್ಗದರ್ಶನದ ವಿಚಾರ ಗಳೊಂದಿಗೆ ದಲಿತ ಸಂಘರ್ಷ ಸಮಿತಿ ಒಂದು ಪರಿವರ್ತನಾ ಚಳುವಳಿ ಯನ್ನಾಗಿ ರೂಪಿಸುತ್ತಾ ಬಂದಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಧ್ಯಕ್ಷ ಸಿ.ಎಸ್. ಷಡಾಕ್ಷರಿ, ವಿಶ್ರಾಂತ ಪ್ರಾಧ್ಯಾಪಕ ಡಾ. ಸಣ್ಣರಾಮ, ಪ್ರಮುಖರಾದ ಹನುಮಂತಪ್ಪ ಕಾಕರಗಲ್, ಎನ್. ಮಂಜುನಾಥ್, ಎಂ. ಏಳುಕೋಟಿ, ಎಸ್.ಪಿ. ಶೇಷಾದ್ರಿ, ಬಿ.ಎ. ಕಾಟ್ಕೆ, ಮುಂಡರಗಿ ನಾಗರಾಜ್ ಇನ್ನಿತರರಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಶಿವಬಸಪ್ಪ ಸ್ವಾಗತಿಸಿದರು.

Leave a Reply

Your email address will not be published. Required fields are marked *