google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ಮಾಡಿ ಗೋರಕ್ಷಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿಕೊಂಡು ಅಕ್ರಮವಾಗಿ ಗೋಸಾಗಣೆ ಮಾಡುತ್ತಿದ್ದ ವ್ಯಕ್ತಿಗಳನ್ನು ಮತ್ತು ವಾಹನವನ್ನು ಜಪ್ತಿಮಾಡದೆ ಹಿಂದೂಗಳ ಭಾವನೆಗೆ ಧಕ್ಕೆತಂದು, ಕಾನೂನನ್ನು ಪಾಲಿಸದೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ಶಿವಮೊಗ್ಗ ವತಿಯಿಂದ ಜಯನಗರ ಠಾಣೆಯ ಮುಂಭಾಗದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಕಛೇರಿಗೆ ತೆರಳಿ ಅಲ್ಲಿ ಬಹಿರಂಗ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮುಸ್ಲಿಂರ ತುಷ್ಠೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದೂಗಳ ಮೇಲೆ ನಾನಾ ರೀತಿಯ ದಬ್ಬಾಳಿಕೆ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರವು ಪೊಲೀಸರಿಗೆ ಸೂಚನೆ ನೀಡಿ, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಮಧ್ಯರಾತ್ರಿ ಕಾರ್ಯಕರ್ತರ ಮನೆಗೆ ಭೇಟಿನೀಡಿ, ಅವರ ಮಾನಸಿಕತೆಯನ್ನು ಕುಗ್ಗಿಸುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜರಿಯಲ್ಲಿದ್ದರೂ ಅಕ್ರಮ ಗೋಸಾಗಾಣಿಕೆ ಕಾನೂನುಬಾಹಿರವಾಗಿದ್ದರೂ ಸಹಾ ಜೂನ್ 6ರಂದು ಬೆಳಗಿನ ಜವ 1.28ಕ್ಕೆ ನಗರದ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಗೋಸಾಗಾಣಿಕೆ ಆಗುತ್ತಿದ್ದ ವಿಚಾರವನ್ನು ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕೆ ವಿಹೆಚ್‌ಪಿ ಕಾರ್ಯಕರ್ತನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಯಾವುದೇ ದಾಖಲೆ ಇಲ್ಲದಿದ್ದರೂ ಅಕ್ರಮವಾಗಿ ಮೂರು ಗೋವುಗಳನ್ನು ಸಾಗಿಸುತ್ತಿದ್ದ ಕೆ.ಎ.48 7597 ಅಶೋಕ್ ಲೈಲ್ಯಾಂಡ್ ವಾಹನವನ್ನು ಜಪ್ತಿಮಾಡದೆ ಆರೋಪಿಗಳನ್ನು ಬಂಧಿಸದೆ ರಾಜಕೀಯ ಒತ್ತಡಕ್ಕೆ ಒಳಗಾಗಿ ಪೊಲೀಸ್ ಠಾಣೆಯಿಂದ ಬಿಟ್ಟುಕಳುಹಿಸಿರುತ್ತಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಹಿಂದೂಗಳ ಭಾವನೆಗೆ ಧಕ್ಕೆಯಾದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಕೂಡಲೇ ರಾಜ್ಯಪಾಲರು ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಶ್ರಮವಹಿಸಿ ನ್ಯಾಯಕೊಡಿಸಿಬೇಕೆಂದು ವಿನಂತಿಸಲಾಗಿದೆ.

ಮನವಿ ನೀಡುವ ಸಂದರ್ಭದಲ್ಲಿ ವಿಹೆಚ್‌ಪಿ ಜಿಲ್ಲಾಧ್ಯಕ್ಷ ವಾಸುದೇವ್, ಶಾಸಕ ಡಿ.ಎಸ್. ಅರುಣ್, ಪ್ರಮುಖರಾದ ರಮೇಶ್‌ಬಾಬು ಜದವ್, ಸುರೇಶ್‌ಬಾಬು, ದೀನದಯಾಳ್, ರಾಜು, ವಡಿವೇಲು, ಅಂಕುಶ್, ರಾಜೇಶ್ ಗೌಡ ಮತ್ತಿತರರಿದ್ದರು.

Leave a Reply

Your email address will not be published. Required fields are marked *