ಶಿವಮೊಗ್ಗ :- ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಘಟಕದ ವತಿಯಿಂದ ಇಂದು ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ರಾಗಿಗುಡ್ಡದಲ್ಲಿ ಬಡವರೇ ಹೆಚ್ಚಾಗಿದ್ದಾರೆ. ಇಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ರಾಜರೋಷವಾಗಿ ಹಲವು ಮನೆಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಾರೆ. ಈ ಬಗ್ಗೆ ನಮ್ಮ ಸಂಘಟನೆ ಹಲವು ಬಾರಿ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಅಬಕಾರಿ ಇಲಾಖೆ ಅಧಿಕಾರಿಗಳು ಮಾರಾಟಗಾರರ ಜೊತೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ಆದ್ದರಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್.ಎಸ್., ಪ್ರಮುಖರಾದ ಸುರೇಶ್, ರಾಮು, ಮಂಜುನಾಥ್ ಹೆಚ್.ಎನ್., ಸಾಧಿಕ್, ಸತೀಶ್, ಮಾಲತೇಶ್, ಮೊಹಮ್ಮದ್ ಶಫಿ, ಪರಮೇಶ್ ಮೊದಲಾದವರಿದ್ದರು.