google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ದೇಶ ಮತ್ತು ದೇಶವಾಸಿಗಳ ರಕ್ಷಣೆಗಾಗಿ ತಮ್ಮ ಅಮೂಲ್ಯ ಜೀವವನ್ನೇ ತ್ಯಾಗ ಮಾಡಿದ ಹಾಗೂ ೨೬ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಆಚರಿಸಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಅವರು ಇಂದು ನಗರದ ಸೈನಿಕ ಪಾರ್ಕ್‌ನಲ್ಲಿ ಸೈನಿಕ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ, ನೆಹರೂ ಸ್ಟೇಡಿಯಂ ಗೆಳೆಯರ ಬಳಗ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹುತಾತ್ಮ ಸೈನಿಕರ ಸ್ಮಾರರಕ್ಕೆ ಪುಷ್ಪಗೌರವ ಸಲ್ಲಿಸಿ, ಮಾತನಾಡುತ್ತಿದ್ದರು.

ದೇಶಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ. ದೇಶದ ರಕ್ಷಣೆಯ ವಿಷಯದಲ್ಲಿ ನಮ್ಮ ದೇಶದ ಪ್ರತಿ ಸೈನಿಕರೂ ಕಠಿಬದ್ದರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ದೇಶದ ಪ್ರತಿ ವ್ಯಕ್ತಿಯ ನೆಮ್ಮದಿಯ ಬದುಕಿನ ಹಿಂದೆ ಸೈನಿಕರ ಸಹಕಾರವಿರುವುದನ್ನು ನಾವು ಸದಾ ನೆನಪಿಸಿಕೊಳ್ಳಬೇಕು ಎಂದ ಅವರು, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯ ನಮ್ಮ ವೀರಯೋಧರು ಪ್ರಾಣಾರ್ಪಣೆ ಮಾಡಿರುವುದು ನೋವನ್ನುಂಟು ಮಾಡುತ್ತದೆ. ಈ ಸಂದರ್ಭದಲ್ಲಿ ದೇಶದ ಪ್ರತಿ ನಾಗರೀಕರೂ ಹುತಾತ್ಮರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವ ಪ್ರಮಾಣ ಕೈಗೊಳ್ಳಬೇಕು ಎಂದರು.

ಈ ಕಾರ್ಯಕ್ರಮವು ಸಶಸ್ತ್ರ ಪಡೆಗಳ ನಿರಂತರ ಧೈರ್ಯ ಮತ್ತು ಸಮರ್ಪಣೆ, ರಾಷ್ಟ್ರೀಯ ಒಗ್ಗಟ್ಟು, ಸೇವೆ ಮತ್ತು ಶಾಂತಿಯ ಮಲ್ಯಗಳು ಮತ್ತು ಭಾರತವನ್ನು ಸುರಕ್ಷಿತವಾಗಿ ಡುವ ನಿಜ ಜೀವನದ ವೀರರನ್ನು ನೆನಪಿಸಿಕೊಳ್ಳುವ ಮಹತ್ವದ ದಿನವಾಗಿದೆ. ಯುವ ಮನಸ್ಸುಗಳಲ್ಲಿ ದೇಶಭಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಕೃತಜ್ಞತೆಯ ಭಾವನೆಯನ್ನು ತುಂಬಲು ಶಾಲೆಗಳು ಈ ದಿನವನ್ನು ಆಚರಿಸುತ್ತವೆ. ಇದು ವಿದ್ಯಾರ್ಥಿಗಳು ತಮ್ಮ ದೇಶವನ್ನು ಮೆಚ್ಚುವಂತೆ ಮತ್ತು ಏಕತೆ ಮತ್ತು ಸಾಮರಸ್ಯದ ಮಹತ್ವವನ್ನು ಅರ್ಥಮಾಡಿಕೊಳ್ಳಲು ಪ್ರೇರೇಪಿಸುತ್ತದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈ ದೇಶದ ರಕ್ಷಣೆಗಾಗಿ ತ್ಯಾಗ, ಬಲಿದಾನ ಮಾಡಿದ ವೀರಯೋಧರ ಸವಿನೆನಪಿ ಗಾಗಿ ಆಚರಿಸಲಾಗುತ್ತಿರುವ ೨೬ನೇ ಕಾರ್ಗಿಲ್ ವಿಜಯೋತ್ಸವ ಹುತಾತ್ಮ ಯೋಧರ, ವೀರನಾರಿಯರ ಕುಟುಂಬಕ್ಕೆ ಬೆಂಬಲವಾಗಿರಲಿದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಇನ್ನಷ್ಟು ರಚನಾತ್ಮಕವಾಗಿ ರೂಪಿಸಿ ಆಚರಿಸಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ಡಾ. ಹಿರೇಮಠ್ ಸೇರಿದಂತೆ ಅಸಂಖ್ಯಾತ ಮಾಜಿ ಯೋಧರು, ಹುತಾತ್ಮ ಯೋಧರ ಕುಟುಂಬದ ಸದಸ್ಯರು, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಬೈಕ್ ರ್‍ಯಾಲಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನಿಶಾನೆ ತೋರಿ ಸುವ ಮೂಲಕ ಚಾಲನೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಿಂದ ಹೊರಟ ಈ ರ್ಯಾಲಿಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮ ವಾಗಿ ಸೈನಿಕ ಪಾರ್ಕನಲ್ಲಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *