ಶಿವಮೊಗ್ಗ :- ನಗರದ ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವನ್ನು ಕತ್ತು ಸೀಳಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತ ದೇಹ ಪತ್ತೆಯಾಗಿದೆ.

ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿದ್ದಂತ ಸಂದರ್ಭದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿತ್ತು.
ಈ ವಿಷಯವನ್ನು ಮೆಗ್ಗಾನ್ ಆಸ್ಪತ್ರೆಯ ಅಧಿಕಾರಿಗಳಿಗೆ ಸ್ವಚ್ಛತಾ ಸಿಬ್ಬಂದಿ ತಿಳಿಸಿದ್ದಾರೆ. ಸ್ಥಳಕ್ಕೆ ತೆರಳಿದಂತ ಮೆಗ್ಗಾನ್ ಆಸ್ಪತ್ರೆಯ ಅಧಿಕಾರಿಗಳು ಪರಿಶೀಲಿಸಿದಾಗ ಒಂದು ದಿನದ ಮಗುವನ್ನು ಕತ್ತು ಸೀಳಿ ಹತ್ಯೆ ಮಾಡಿರುವುದು ಗೊತ್ತಾಗಿದೆ.
ಮೆಗ್ಗಾನ್ ಆಸ್ಪತ್ರೆಯ ಅಧಿಕಾರಿಗಳು ದೊಡ್ಡಪೇಟೆ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಕೃತ್ಯ ಎಸಗಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.