ಶಿವಮೊಗ್ಗ :- ಹಾಲಿನ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ವೈದ್ಯಕೀಯ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಇಂದು ಬೆಳ್ಳಂಬೆಳಿಗ್ಗೆ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ನಡೆದಿದೆ.
ಸಿಮ್ಸ್ ಮೆಡಿಕಲ್ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿಗಳಾದ ಆದಿತ್ಯ (21) ಸಂದೀಪ್ (21) ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಧೈ ವಿದ್ಯಾರ್ಥಿಗಳಾಗಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯರಾಗಿದ್ದಾರೆ.
ಅಪಘಾತದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ. ಹಾಲಿನ ವಾಹನದಲ್ಲಿದ್ದ ಹಾಲಿನ ಪ್ಯಾಕೆಟ್ಗಳು ಒಡೆದು ರಸ್ತೆಯ ಮೇಲೆಲ್ಲಾ ಹರಿದಾಡಿದೆ.
ಯುವಕರು ಯುವಕರು ಇಂದು ಬೆಳಿಗ್ಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ಹಾಸ್ಟೆಲ್ಗೆ ಬರುವಾಗ ಬಸ್ ನಿಲ್ದಾಣದ ಕಡೆಯಿಂದ ಹೊರಟಿದ್ದ ಹಾಲಿನ ವಾಹನ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಹಾಲಿನ ವಾಹನದ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತಿದ್ದಾರೆ.