google.com, pub-9939191130407836, DIRECT, f08c47fec0942fa0

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲು ಜಾತಿ ಜನಗಣತಿಯ ವಿವಾದವೊಂದೇ ಸಾಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮತ್ತೆ ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೇಸ್ ನೇತೃತ್ವದ ರಾಜ್ಯ ಸರ್ಕಾರ ಜಾತಿ ಗಣತಿಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ. ಈ ಹಿಂದೆ ನಡೆಸಿದ ಗಣತಿಯನ್ನೇ ಯತಾವತ್ತಾಗಿ ಜರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್ ಒತ್ತಡಕ್ಕೆ ಮಣಿದು ಮತ್ತೆ ಜನಗಣತಿ ಮಾಡುವುದಾಗಿ ಹೇಳಿದ್ದರು. 150 ಕೋಟಿಗೂ ಅಧಿಕ ಹಣವನ್ನು ವ್ಯಯಿಸಿ ಮಾಡಿದ ಗಣತಿಯನ್ನು ಕಸದ ಬುಟ್ಟಿಗೆ ಎಸೆದು ಈಗ ಮತ್ತೆ ಸುಮಾರು 420 ಕೋಟಿ ವೆಚ್ಚದಲ್ಲಿ ಗಣತಿ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ಜತಿ ಗಣತಿ ಹೆಸರಿನಲ್ಲಿ ಹಿಂದೂಗಳನ್ನು ಒಡೆದು ತನ್ನ ವೋಟ್ ಬ್ಯಾಂಕ್‌ಗಳನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೇಸ್ ಪಕ್ಷದ ಹಿಡನ್ ಅಜೆಂಡಾ ಸ್ಪಷ್ಟವಾಗಿ ಕಾರ್ಯಾನಿರ್ವಹಿಸುತ್ತಿದೆ. ಈ ಹಿಂದಿನ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿರುವ ಜತಿ ಪಟ್ಟಿಯಲ್ಲಿ ಮತಾಂತರಗೊಂಡ ಹಿಂದೂಗಳಿಗಾಗಿಯೇ ಹೆಚ್ಚುವರಿ ಜಾತಿಗಳನ್ನು ಸೃಷ್ಟಿಸಿ ಕುರುಬ ಕ್ರಿತಿಯನ್, ಲಿಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ಈ ರೀತಿ ಸುಮಾರು 50ಕ್ಕೂ ಹೆಚ್ಚು ಜತಿಗಳನ್ನು ಕ್ರಿಶ್ಚಿಯನ್ ಧರ್ಮದ ಹೆಸರಿನಲ್ಲಿ ಸೇರಿಸಿ ಹಿಂದೂಯೇತರ ಧರ್ಮೀಯರ ಜನಸಂಖ್ಯೆಯನ್ನು ವ್ಯವಸ್ಥಿತವಾಗಿ ಹೆಚ್ಚು ತೋರಿಸುವ ಕೆಲಸವನ್ನು ಕಾಂಗ್ರೇಸ್ ಸರ್ಕಾರ ಮಾಡುತ್ತಿದೆ ಎಂದರು.

ಈ ರೀತಿ ಮಾಡುವುದರಿಂದ ಹಿಂದೂಗಳಲ್ಲಿರುವ ಪರಿಶಿಷ್ಟ ಜತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮತಾಂತರಗೊಂಡವರು ಕಬಳಿಸುವ ಪ್ರಯತ್ನಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ನಮ್ಮ ಸಂವಿಧಾನದಲ್ಲಿರುವ ಆರು ಧರ್ಮಗಳ ಹೊರತಾಗಿ ಬೇರೆ ಯಾವುದೇ ಧರ್ಮಗಳ ಸೇರ್ಪಡೆ ಸಂವಿಧಾನ ವಿರೋಧಿಯಾಗಿದ್ದರೂ ಮತಾಂತರಗೊಂಡ ಕ್ರೈಸ್ತರು ಎಂಬ ಹೊಸ ಧರ್ಮವನ್ನು ಕಾಂಗ್ರೇಸ್ ಹುಟ್ಟು ಹಾಕಿದೆ. ರಾಜ್ಯ ಸರ್ಕಾರ ಹಿಂದುಳಿದ ಆಯೋಗದ ಮುಖಾಂತರ ಪ್ರಕಟಿಸಿರುವ ಈ ಸಂವಿಧಾನ ಬಾಹಿರ ಹಿಂದೂ ಜತಿಗಳ ಹೆಸರಿನೊಂದಿಗಿನ ಕ್ರಿಶ್ಚಿಯನ್ ಹೆಸರಿನ ಪಟ್ಟಿಯನ್ನು ಈ ಕೂಡಲೇ ಹಿಂಪಡೆದು ಆಗಿರುವ ಪ್ರಮಾದಕ್ಕೆ ಹಿಂದೂಗಳ ಕ್ಷಮೆ ಕೋರಬೇಕು ಎಂದರು.

ಈ ತಿಂಗಳ ಸೆ. 22ರಂದು ಆರಂಭವಾಗುವ ಸಮೀಕ್ಷೆಯಲ್ಲಿ ಮತ್ತೆ ಇಂತಹ ತಪ್ಪುಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಕಾಂಗ್ರೇಸ್ ಪಕ್ಷದ ಈ ಹಿಂದೂ ವಿರೋಧಿ ನೀತಿಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಸಮೀಕ್ಷೆಯ ಸಮಯದಲ್ಲಿ ಸಮಸ್ತ ಹಿಂದೂಗಳು ನಿಮ್ಮ ನಿಮ್ಮ ಜತಿ, ಉಪ ಜತಿ ಯಾವುದೇ ಇರಲಿ ಧರ್ಮದ ಕಾಲಂ ನಲ್ಲಿ ಹಿಂದೂ ಎಂದೇ ನಮೂದಿಸಬೇಕು ಹಾಗೂ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ಹಿಂದೂ ಸನಾತನ ಧರ್ಮವನ್ನು ಒಗ್ಗೂಡಿಸಿಕೊಂಡು ಸಮಾಜದ ಹಿತ ಕಾಪಾಡಬೇಕೆಂದರು.

ಶಿವಮೊಗ್ಗದ ವಿಮಾನ ನಿಲ್ದಾಣ ಆರಂಭಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಬ್ಬರ ಕೊಡುಗೆಯೂ ಇದೆ. ಆದರೆ ವಿಮಾನ ನಿಲ್ದಾಣವೀಗ ನಂಬಿಕೆ ಕಳೆದುಕೊಳ್ಳುವತ್ತ ಸಾಗಿದೆ. ಹಲವು ಬಾರೀ ದ್ಢೀರನೇ ವಿಮಾನ ಹಾರಾಟ ರದ್ದುಗೊಳ್ಳುತ್ತದೆ. ಈ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿಸ್ಟಮ್ ಅಳವಡಿಕೆ ಆಗದಿರುವುದು ಹಲವು ಬಾರಿ ವಿಮಾನ ಲ್ಯಾಂಡ್ ಆಗಲು ತೊಂದರೆ ಆಗಿರುವ ಘಟನೆಗಳು ನಡೆದಿರುತ್ತದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವುದು ನಡೆದಿದೆ. ರಾಜ್ಯ ಸರ್ಕಾರದ ನಿರ್ವಹಣೆಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ರಾಜ್ಯದ ಏಕೈಕ ವಿಮಾನ ನಿಲ್ದಾಣವಾದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವುದರ ಮೂಲಕ ಈ ಬಾಗದ ಜನತೆಗೆ ಇನ್ನೂ ಹೆಚ್ಚಿನ ಅನುಕೂಲಗಳನ್ನು ಮಾಡಿಕೊಡುವುದು ಎಲ್ಲಾ ಜನಪ್ರತಿನಿದಿಗಳ ಕರ್ತವ್ಯ. ಈ ವಿಷಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಇಬ್ಬರೂ ಸೇರಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ಆದಷ್ಟು ಬೇಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿಸ್ಟಮ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಹಿಂದೂಗಳು ಹಬ್ಬವನ್ನೇ ಆಚರಿಸಬಾರದು ಎಂದು ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದಂತಿದೆ. ಗಣಪತಿ ಮೆರವಣಿಗೆಯಲ್ಲಿ ಮಸೀದಿಯಿಂದ ಕಲ್ಲು ತೂರುತ್ತಾರೆ. ಮಹಡಿ ಮನೆಗಳ ಮೇಲೆ ನಿಂತು ಮೆರವಣಿಗೆಯ ಮೇಲೆ ಉಗಿಯುತ್ತಾರೆ. ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುತ್ತಾರೆ. ಆದರೂ ಈ ಸರ್ಕಾರ ಸುಮ್ಮನಿದೆ. ಈ ರಾಜ್ಯ ಸರ್ಕಾರ ಮುಸಲ್ಮಾನರ ರಕ್ತದಲ್ಲಿಯೇ ಆಡಳಿತ ನಡೆಸುತ್ತಿದೆಯೇ ಎಂದು ಖಾರವಾಗಿ ಪ್ರಶ್ನೆ ಮಾಡಿದ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆಹಾಕಬೇಕು. ಈ ಬಗ್ಗೆ ನಾವು ಮಾತನಾಡಿದರೆ ಕೋಮುವಾದಿಗಳು ಎಂದು ಕರೆಯುತ್ತಾರೆ ಎಂದ ಅವರು, ಶಿವಮೊಗ್ಗದಲ್ಲಿ ಎರಡೂ ಧರ್ಮದ ಮೆರವಣಿಗೆಗಳು ಯಾವ ಅಹಿತಕರ ಘಟನೆ ಇಲ್ಲದೆ ಶಾಂತಿಯುತವಾಗಿ ನಡೆದಿದೆ. ಇದಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದರು.

ನಾಳೆ ಪ್ರಧಾನಿ ಮೋದಿಯವರ ಜನ್ಮದಿನಾಚರಣೆ ಭಗವಂತ ಅವರೊಳಗೇ ಇದ್ದಾನೆ. ಜಗತ್ತೇ ಅವರ ಜೊತೆಗಿದೆ. ಅವರಿಗೆ ಶುಭಾಶಯ ಎಂದರು.

Leave a Reply

Your email address will not be published. Required fields are marked *