google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಮಹಾ ನಗರ ಪಾಲಿಕೆ ವತಿಯಿಂದ ಸೆ. 24ರ ಬುಧವಾರದಂದು ಪರಿಸರ ದಸರಾವನ್ನು ಆಚರಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಪಾಲಿಕೆ ಯೊಂದಿಗೆ ಶಿವಮೊಗ್ಗ ನಗರದ ಪರಿಸರಾಸಕ್ತ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಸೈಕಲ್ ಜಾಥಾ ಹಾಗೂ ಹಸಿರೀಕಣ ಕಾರ್ಯದ ಮೂಲಕ ಪರಿಸರ ದಸರಾ -2025 ನ್ನು ಮಾದರಿ ಹಾಗೂ ಹೆಚ್ಚು ಅರ್ಥಪೂರ್ಣವಾಗಿ ಆಚರಿಸುವ ಪಾಲಿಕೆಯ ನಿರ್ಧಾರವನ್ನು ನಗರದ ವಿವಿಧ ಸಂಘ ಸಂಸ್ಥೆಗಳು ಸ್ವಾಗತಿಸಿವೆ. ಬುಧವಾರ ಬೆಳಿಗ್ಗೆ 7.30ಕ್ಕೆ ಮಹಾನಗರಪಾಲಿಕೆ ಆವರಣದಲ್ಲಿ ಬೃಹತ್ ಸೈಕಲ್ ಜಾಥಾಕ್ಕೆ ಚಾಲನೆ ದೊರೆಯಲಿದ್ದು, ಸೈಕಲ್ ಜಾಥಾವು ಮಹಾನಗರ ಪಾಲಿಕೆ ಆವರಣದಿಂದ ಸೀನಪ್ಪ ಶೆಟ್ಟಿ ವೃತ್ತ, ಅಂಬೇಡ್ಕರ್ ವೃತ್ತ, ಕುವೆಂಪು ರಸ್ತೆ, ಪ್ರವಾಸಿ ಮಂದಿರ ರಸ್ತೆ, ಆಯನೂರು ಗೇಟ್, ದ್ರೌಪದಮ್ಮ ವೃತ್ತ, ರಾಮಕೃಷ್ಣ ಶಾಲೆ ಮುಖಾಂತರ ಮಹಿಳಾ ಪಾಲಿಟೆಕ್ನಿಕ್ ಹಿಂಭಾಗದ ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ಬಳಿ ಸೇರುವುದು.ನಂತರ ಈ ಸ್ಥಳದಲ್ಲಿ ಒಂದು ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಪರಿಸರ ತಜ್ಞ ಡಾ. ಶ್ರೀಪತಿ ಎಲ್.ಕೆ. ರವರು ಚಾಲನೆ ನೀಡಲಿದ್ದಾರೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಅಧಿಕಾರಿ ಶಿಲ್ಪಾ ಕೆ. ರವರು, ಪಾಲಿಕೆ ಅಧಿಕಾರಿಗಳು , ಜನಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ.

ನಗರದ ವಿವಿಧ ಸಂಘ ಸಂಸ್ಥೆಗಳು, ಪರಿಸರಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಪರ್ಯಾವರಣ ಟ್ರಸ್ಟ್ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಮತ್ತು ಪರಿಸರಾಸಕ್ತ ತಂಡಗಳು ಸಾರ್ವಜನಿಕರಲ್ಲಿ ವಿನಂತಿ ಮಾಡಿರುತ್ತಾರೆ.

Leave a Reply

Your email address will not be published. Required fields are marked *