google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ರಾಷ್ಟ್ರಗೀತೆ ಬ್ರಿಟೀಷರ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಹೇಳಿ ‘ರಾಷ್ಟ್ರಗೀತೆ’ಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಗೊಳಿಸಲು ಒತ್ತಾಯಿಸಿ ಇಂದು ನಗರದಲ್ಲಿ ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಭಾರತ ದೇಶದ ರಾಷ್ಟ್ರಗೀತೆ ‘ಜನಗಣ ಮನ’ವನ್ನು ಬ್ರಿಟೀಷರ ಸ್ವಾಗತಕ್ಕೆ ರಚಿಸಿದ್ದು, ಅದನ್ನು ರಾಷ್ಟ್ರಗೀತೆಯನ್ನಾಗಿ ಮಾಡಿದ್ದು ಸರಿಯಲ್ಲ ಎಂದು ಹೇಳುವ ಮೂಲಕ ನೂರಾನಲವತ್ತು ಕೋಟಿ ಭಾರತೀಯರ ಅಸ್ಮಿತೆಯಾಗಿರುವ ರಾಷ್ಟ್ರಗೀತೆಗೆ ಅಪಮಾನವೆಸಗಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ನವೆಂಬರ್ ೫ರಂದು ಹೊನ್ನಾವರದಲ್ಲಿ ಆಯೋಜಿಸಿದ್ದ ‘ಏಕತೆಗಾಗಿ ನಡಿಗೆ’ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯು ರಾಷ್ಟ್ರಗೀತೆಯಾಗಬೇಕೆಂದು ಪ್ರತಿಪಾದಿಸುತ್ತಾ ಭಾರತೀಯರೆಲ್ಲರೂ ಒಪ್ಪಿಕೊಂಡಿರುವ ‘ಜನಗಣಮನ’ ರಾಷ್ಟ್ರಗೀತೆಯಾಗಿರುವುದು ಸರಿಯಲ್ಲ, ಅದನ್ನು ಬ್ರಿಟೀಷರ ಸ್ವಾಗತಕ್ಕೆ ರಚಿಸಿದ್ದು ಎಂದು ಹೇಳುವ ಮೂಲಕ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಕಾಗೇರಿಯವರು ರಾಜ್ಯದ ಶಿಕ್ಷಣ ಸಚಿವರಾಗಿ, ವಿಧಾನಸಭೆಯ ಸ್ಪೀಕರ್ ಹುದ್ದೆಯಂತಹ ಸಾಂವಿಧಾನಿಕ ಹುದ್ದೆಯನ್ನು ನಿಭಾಯಿಸಿದ್ದವರು. ಆದರೆ, ಸಂಸದರಾಗಿ ಜನರಲ್ಲಿ ರಾಷ್ಟ್ರಗೀತೆ, ಸಂವಿಧಾನಗಳ ಬಗ್ಗೆ ಗೌರವ ಭಾವನೆ ಮೂಡಿಸುವಂತಹ ಮಾತುಗಳನ್ನಾಡಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.

ಗೌರವಾನ್ವಿತ ರಾಷ್ಟ್ರಪತಿಗಳು ಕೂಡಲೇ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಗೊಳಿಸಬೇಕು. ರಾಷ್ಟ್ರಗೀತೆಗೆ ಅಪಮಾನ ಮಾಡಿರುವರು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಲಯದ ಅಧ್ಯಕ್ಷ ಚೇತನ್ ಕೆ. ಯುವ ಮುಖಂಡ ಮಧುಸೂದನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಡ್ಡು ಹಾಗೂ ಪ್ರಮುಖರಾದ ವಿಜಯ್, ರವಿ ಕಾಟಿಕೆರೆ ರವಿ ಕುಮಾರ, ಚಂದ್ರೋಜಿ ರಾವ್, ವರುಣ್ ,ಅಭಿ , ಆದಿತ್ಯ, ಸುಭಾನ್. ಫರಾಜ್, ಲೋಹಿತ್, ಯೂಸುಫ್, ರಿಹಾನ್, ಅಲ್ಹಾನ್, ಉಮ್ಮಾರ್, ಫಾರೂಕ್, ಸಮೀರ್, ಅಭಿಷೇಕ್, ಶ್ರೀಕಾಂತ್, ಅಂಜನ್, ಸೃಜನ್, ಪ್ರಸನ್ನ, ಆಕಾಶ್, ನಂದನ್, ನವೀನ್ ಇನ್ನಿತರರಿದ್ದರು.

Leave a Reply

Your email address will not be published. Required fields are marked *