ಶಿವಮೊಗ್ಗ :- ಅಂತರ ರಾಷ್ಟ್ರೀಯ ವಾಣಿಜ್ಯ ಮೇಳದ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಮುಂಬರುವ ಜ. 6 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ “ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ” ಸ್ಪರ್ಧೆಯನ್ನು ಆಯೋಜಿಸಲಾಗಿದೆ
ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದೆ.

ಪ್ರತಿ ಸ್ಪರ್ಧೆಗೆ ಸಿರಿಧಾನ್ಯದ ಒಂದು ಸಿಹಿ ಅಥವಾ ಖಾರದ ತಿನಿಸು ಅಥವಾ ಒಂದು ಮರೆತು ಹೋದ ಖಾದ್ಯ(ಸಸ್ಯಹಾರಿ ತಿನಿಸು ಮಾತ್ರ) ತಯಾರಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ ಪಾಕ ಸ್ಪರ್ಧೆ ನಡೆಯುವ ಸ್ಥಳದಲ್ಲಿ ಪ್ರದರ್ಶಿಸುವುದು. ತಯಾರಿಸಿದ ತಿನಿಸುಗಳನ್ನು ಅದಕ್ಕೆ ಬಳಸಿದ ಸಾಮಾಗ್ರಿಗಳು, ತೋರಿಕೆ, ರುಚಿ, ಸುವಾಸನೆ, ಪೌಷ್ಟಕತೆ ಇವುಗಳ ಆಧಾರದ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು.

ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ಪ್ರಥಮ ಸ್ಥಾನಕ್ಕೆ ರೂ. 5ಸಾವಿರ, ದ್ವಿತೀಯ ಸ್ಥಾನಕ್ಕೆ ರೂ. 3ಸಾವಿರ ಹಾಗೂ ತೃತೀಯ ಸ್ಥಾನಕ್ಕೆ ರೂ.2ಸಾವಿರ ಬಹುಮಾನವನ್ನು ನೀಡಲಾಗುತ್ತದೆ. ಈ ಸ್ಪರ್ಧೆಯಲ್ಲಿ ಪ್ರಸಕ್ತ ಸಾಲಿನ ಪ್ರಶಸ್ತಿ ವಿಜೇತರಿಗೆ ಭಾಗವಹಿಸಲು ಅವಕಾವಿರುವುದಿಲ್ಲ.
ಹೆಚ್ಚಿನ ಮಾಹಿತಿಗೆ ದೂ. 08182-222635ರಲ್ಲಿ ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.