
ಶಿವಮೊಗ್ಗ :- ಇತ್ತೀಚೆಗೆ ಬಾಂಗ್ಲಾದಲ್ಲಿ ನಡೆದ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಇಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಸಮುದಾಯದ ಮೇಲೆ ನಡೆದಿರುವ ಬರ್ಬರ ಹತ್ಯೆಗಳು ಹಾಗೂ ಅಮಾನುಷ ದೌರ್ಜನ್ಯಗಳನ್ನು ತಾವು ಖಂಡಿಸುವುದಾಗಿ ತಿಳಿಸಿದ ಸಮಿತಿಯ ಪದಾಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರಲ್ಲದೆ ಕರ್ನಾಟಕ ರಾಜ್ಯ ಸರ್ಕಾರವು ಜರಿಗೆ ತರಲು ಹೊರಟಿರುವ ದ್ವೇಷಭಾಷಣ ವಿಧೇಯಕವನ್ನು ತಕ್ಷಣವೇ ವಾಪಾಸ್ಸು ಪಡೆಯಬೇಕು ಎಂದು ಆಗ್ರಹಿಸಿದರು.
ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂಗಳ ಹತ್ಯೆ ದೇವಾಲಯಗಳ ಧ್ವಂಸ ಹಾಗೂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಭಾರತ ಸರ್ಕಾರವು ಅಗತ್ಯ ರಾಜ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರಸ್ತಾವಿತ ದ್ವೇಷ ಭಾಷಣ ವಿದೇಯಕವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ವಿಶೇಷವಾಗಿ ಹಿಂದೂ ಸಮಾಜದ ಧಾರ್ಮಿಕ ಆಚರಣೆಗಳು ಧರ್ಮಪ್ರಚಾರ ಹಾಗೂ ಸತ್ಯವಚನಕ್ಕೆ ಅಡ್ಡಿಯಾಗುವಂತ್ತದ್ದಾಗಿದೆ. ಆದ್ದರಿಂದ ಈ ವಿಧೇಯಕವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ದಿನೇಶ್ ಚೌವ್ಹಾಣ್, ರಮೇಶ್ ಬಾಬು, ವಾಸುದೇವ, ಪ್ರಫುಲ್ಲಚಂದ್ರ ಹೆಚ್., ಪರಿಸರ ರಮೇಶ್, ಯೋಗೇಶ್, ಪ್ರದೀಪ್, ಮುಕುಂದ, ಬಸವರಾಜ್, ಶಬರೀಶ್ ಮೊದಲಾದವರಿದ್ದರು.
