
ಶಿವಮೊಗ್ಗ :- ಜಿಲ್ಲಾ ಎನ್ಎಸ್ಯುಐ ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆಯನ್ನು ನಗರದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮುಖಾಂತರ ಆಚರಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ನಂತರ ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಕೆ. ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಯನ್ನು ಮುಟ್ಟುವ ತನಕ ನಿಲ್ಲಬಾರದು ತಮ್ಮ ಗುರಿಯೆಡೆಗೆ ಸಾಗುವುದನ್ನು ರೂಢಿಸಿಕೊಳ್ಳಬೇಕು ಎಂದು ಮಾತನಾಡಿದ ಬಳಿಕ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಯಮುನಾ ರಂಗೇಗೌಡ ಅವರು ವಿವೇಕಾನಂದರ ಆದರ್ಶಗಳನ್ನು ಅಮೆರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮ ಅವರು ಭಾರತ ದೇಶಕ್ಕೆ ಬಂದ ಸಂದರ್ಭದಲ್ಲಿ ಸ್ಮರಿಸಿದರು ಎಂದು ವಿದ್ಯಾರ್ಥಿಗಳಿಗೆ ನೆನಪಿಸಿದರು.
ನಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ವೇತಾ ಬಂಡಿಯವರು ಮಾತನಾಡಿ ಸ್ವಾಮಿ ವಿವೇಕಾನಂದರಿಗೆ ನವ ಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ವಿವೇಕಾನಂದರ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಆಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ರವಿಕುಮಾರ್ ಕಾಂಗ್ರೆಸ್ ಯುವ ಮುಖಂಡರಾದ ಸಿ.ಜಿ. ಮಧುಸೂದನ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ಗೌಡ ಎನ್ಎಸ್ಯುಐ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಭಾರತಿ ರಾಮಕೃಷ್ಣ ಗ್ಯಾರಂಟಿ ಸದಸ್ಯರಾದ ಅರ್ಚನಾ ಕಾಂಗ್ರೆಸ್ ಮುಖಂಡರಾದ ನಜಮ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಚರಣ್ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಗಿರೀಶ್ ಎನ್ಎಸ್ಯುಐ ಕಾರ್ಯಧ್ಯಕ್ಷ ರವಿ ಕಾಟಿಕೆರೆ ಎನ್ಎಸ್ಯುಐ ನಗರಧ್ಯಕ್ಷ ರವಿಕುಮಾರ್ ಪದಾಧಿಕಾರಿಗಳಾದ ಚಂದ್ರೋಜಿ ರಾವ್, ವರುಣ್ ವಿ. ಪಂಡಿತ್, ಸುಭಾನ್, ಆದಿತ್ಯ, ಫರಾಜ್, ಆಕಾಶ್, ವಿಕಾಸ್, ಉಲ್ಲಾಸ್, ಇನ್ನೂ ನೂರಾರು ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಿದರು.