google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಇದೇ ಜ. 24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದರು.

ಇಂದು ಅವರು ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾತನಾಡಿ, ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಜಿ.ಪಂ., ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉದ್ಯಾನ ಕಲಾ ಸಂಘದ ಆಶ್ರಯದಲ್ಲಿ ಜ. 24ರಿಂದ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಜ. 24ರ ಬೆಳಿಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸುವರು. ಶಾಸಕ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಅದಿಕಾರಿಗಳು ಹಾಜರಿರುವರು. ಸುಮಾರು 2ಲಕ್ಷ ಸಂಖ್ಯೆಯ ವಿವಿಧ ಬಣ್ಣದ ಹೂವುಗಳಾದ ಗುಲಾಬಿ, ಸೇವಂತಿಗೆ, ಆಂಥೋರಿಯಂ, ಕಾಮಿನಿಲೆ ಮತ್ತು ಫೋಲಿಯೇಜ್ ಗಿಡಗಳನ್ನು ಬಳಸಿ ವಿಶೇಷವಾದ ಹೂವಿನ ಕಲಾಕೃತಿಗಳನ್ನು ರಚನೆ ಇರುತ್ತದೆ ಎಂದು ವಿವರಣೆ ನೀಡಿದರು.

ವಿವಿಧ ಜಾತಿಯ ಹೂವುಗಳಿಂದ 16ಅಡಿ ಎತ್ತರದ ಕೋಟೆ ಹಾಗೂ ಕೆಳದಿ ಶಿವಪ್ಪ ನಾಯಕನ ಪ್ರತಿಮೆ ರಚನೆ, ೧೫ ಅಡಿ ಎತ್ತರದ ಬಳ್ಳಿಗಾವಿ ಕೇದಾರೇಶ್ವರ ದೇವಸ್ಥಾನ ರಚನೆ. ಹೂವುಗಳು ಹಾಗೂ ಫೋಲಿಯೇಜ್‌ನಿಂದ 60 ಅಡಿ ಅಗಲ 22ಅಡಿ ಎತ್ತರದ ಜೋಗ ಜಲಪಾತದ ಕಲಾಕೃತಿಗಳು ಈ ಬಾರಿಯ ಆಕರ್ಷಣೆಗಳಾಗಿದೆ. ಹೂವಿನ ಐ ಲವ್ ಶಿವಮೊಗ್ಗ ಸೆಲ್ಫಿ ಪಾಯಿಂಟ್ ಕುಜ್ಬ ಗಿಡಗಳು (ಬೋನ್ಸಾಯ್) ಗಿಡಗಳ ಪ್ರದರ್ಶನ ಸಹ ಇರುತ್ತದೆ ಎಂದರು.

ಈ ಬೃಹತ್ ವೇದಿಕೆಯಲ್ಲಿ ಸಿರಿಧಾನ್ಯ ಉತ್ಪನ್ನಗಳಿಗೆ ಮಾರುಕಟ್ಟೆ

ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2026 ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಸಿರಿಧಾನ್ಯ ಕುರಿತಾದ ಪ್ರತ್ಯೇಕ ಮಳಿಗೆಯನ್ನು ಕೂಡ ಸ್ಥಾಪಿಸಲಾಗುವುದು. ಇದರಲ್ಲಿ ಕೈಮಗ್ಗ ಜವಳಿ ಮೇಳ ವಿಶೇಷ ರೀತಿಯ ಹೂ, ಹಣ್ಣು, ತರಕಾರಿ ಮತ್ತಿತರ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಸ್ಪರ್ಧೆ ಸೇರಿದಂತೆ ಹೂ ರಂಗೋಲಿ ಸ್ಪರ್ಧೆಯನ್ನು ಜ. 26ರ ಬೆಳಿಗ್ಗೆ 2ಗಂಟೆಗೆ ಆಯೋಜಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಮೊ. 8495876466ರಲ್ಲಿ ಸಂಪರ್ಕಿಸಿ. ಪತ್ರಿಕಾಗೋಷ್ಟಿಯಲ್ಲಿ ಜಿ.ಪಂ ಯೋಜನಾ ನಿರ್ದೇಶಕಿ ನಂದಿನಿ, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ವೈ ಆರ್ ಮಲ್ಲಿಕಾರ್ಜುನ, ದುಮ್ಮಳ್ಳಿ ರಘು, ಚಂದ್ರಕಾಂತ ಹಸಗೋಡು ಹಾಜರಿದ್ದರು.

Leave a Reply

Your email address will not be published. Required fields are marked *