google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಜಿಲ್ಲೆಯ ಜೀವನಾಡಿ ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯ ಪ್ರಸ್ತಾಪ ಸದ್ಯಕ್ಕಿಲ್ಲ, ಸರ್ಕಾರವಾಗಲಿ, ತಾವಾಗಲಿ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯ ಪ್ರಸ್ತಾಪ ಮಲೆನಾಡಿನಲ್ಲಿ ಸಾಕಷ್ಟು ಸುದ್ದಿ ಆಗಿದೆ. ಅನೇಕ ಮಂದಿ ಪರಿಸರ ವಾದಿಗಳು, ಹೋರಾಟಗಾರರು ವಿರೋಧಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಶರಾವತಿ ನದಿಯ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಈ ಬಗ್ಗೆ ಯಾವುದೇ ಆತಂಕಬೇಡ ಎಂದು ತಿಳಿಸಿದರು.

ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ನಮ್ಮ ಸರ್ಕಾರದ್ದಲ್ಲ. ಈ ಹಿಂದೆ ಬೊಮ್ಮಾಯಿ ಸರ್ಕಾರ ಇದ್ದಾಗ ಈ ಯೋಜನೆಯ ಪ್ರಸ್ತಾಪ ಮಾಡಲಾಗಿತ್ತು. ನಮ್ಮ ಸರ್ಕಾರ ಬಂದಾಗ ಈ ಯೋಜನೆಯ ಸಾಧ್ಯಾಸಾಧ್ಯತೆಗಳ ಬಗ್ಗೆ ವರದಿ ಕೇಳಿತ್ತು. ಆಗ ಇದು ೨೦ ಸಾವಿರ ಕೋಟಿ ರೂ. ಯೋಜನೆ ಎಂಬುದು ಬೆಳಕಿಗೆ ಬಂತು. ಹಾಗೆಯೇ ನಾನು ಕೂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಇದು ಅಸಾಧ್ಯದ ಯೋಜನೆ. ಇದು ಕಾರ್ಯ ಸಾಧುವಲ್ಲ, ಇದನ್ನು ಜರಿಗೆ ತರಬಾರದು ಎಂದು ಮನವಿ ಮಾಡಿದ್ದೇನೆ. ಈ ಕಾರಣದಿಂದಲೇ ಸರ್ಕಾರ ಈ ಯೋಜನೆಯನ್ನು ಸದ್ಯಕ್ಕೆ ಕೈ ಬಿಟ್ಟಿದೆ ಎಂದರು.

ಈಗ ಈ ಯೋಜನೆಯ ವಿಚಾರದಲ್ಲಿ ಯಾವುದೇ ಹೋರಾಟಗಳು ಸಜ್ಜುಗೊಳ್ಳುವ ಅವಶ್ಯಕತೆ ಇಲ್ಲ. ಸರ್ಕಾರದ ಮುಂದೆ ಈ ಯೋಜನೆಯ ಪ್ರಸ್ತಾಪ ಇಲ್ಲ ಎಂದು ಮನವಿ ಮಾಡಿದರು.

ಬಿಜೆಪಿಯಲ್ಲಿಯೇ ಕೆಲವು ಶತ್ರುಗಳಿದ್ದಾರೆನ್ನು. ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು, ಕುಮಾರ ಸ್ವಾಮಿ ಅವರಿಗೆ ಈಗ ಬಿಜೆಪಿಯಲ್ಲಿರುವ ಶತ್ರುಗಳಿರುವುದು ಗೊತ್ತಾಗಿದೆ. ಇವರ ಮೈತ್ರಿ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಅದೇ ರೀತಿ, ಬಿಜೆಪಿ ರಾಜಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸಲು ಯತ್ನಾಳ್ ಮತ್ತು ಈಶ್ವರಪ್ಪ ನವರ ತಂಡ ಹೊರಟಿದೆ. ಇದೆಲ್ಲ ಬಿಟ್ಟು ಬಿಜೆಪಿಯವರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವ ಮಾತನಾಡುತ್ತಾರೆ. ಇದು ಹಾಸ್ಯಾಸ್ಪದವಾಗಿದೆ ಎಂದು ಬೇಳೂರು ಹೇಳಿದರು.

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ವಿಧಾನ ಪರಿಷತ್ ವಿಪಕ್ಷನಾಯಕ ನಾರಾಯಣ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳ್ಳ ಎಂದು ಹೇಳಿಕೆ ನೀಡಿದ್ದನ್ಮು ಉಗ್ರವಾಗಿ ಖಂಡಿಸಿದ ಶಾಸಕ ಗೋಪಾಲ ಕೃಷ್ಣ ಬೇಳೂರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇನು ಆರೋಪಿ ಎನ್ನುವುದು ಸಾಬೀತಾಗೆದೆಯಾ ಈ ರೀತಿ ಅವರು ಮಾತನಾಡುವುದು ಸರಿಯಲ್ಲ. ಅವರ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಮುಡಾ ಪ್ರಕರಣ ಎತ್ತಿ ದೊಡ್ಡದಾಗಿ ಮಾಡಿದ್ದಾರೆ. ಯಡಿಯೂರಪ್ಪರನ್ನು ಜೈಲಿಗೆ ಕಳಿಸಿದ್ದು ಯಾರು? ಹಾಗಾದರೆ ಯಡಿಯೂರಪ್ಪ ಕಳ್ಳರಾ ಅದನ್ನು ಹೇಳಬೇಕು ಅಲ್ವೆ ಎಂದು ಪ್ರಶ್ನಿಸಿದರು.

ಸರ್ಕಾರ ಎಂದಿಗೂ ರೈತರ ಪರ:

ಶರಾವತಿ ಸಂತ್ರಸ್ತ್ರರ ಪರವಾಗಿ ಸಂಸದ ರಾಘವೇಂದ್ರ ಕೇಂದ್ರದಲ್ಲಿ ಒಂದು ಮಾತಾಡಿಲ್ಲ. ರೈತರ ಧ್ವನಿಯಾಗಿ ರಾಘವೇಂದ್ರ ಕೆಲಸ ಮಾಡಿಲ್ಲ. ರೈತರ ಪರ ಧ್ವನಿ ಎತ್ತದೆ ಹೋದರೆ ಇವರು ಯಾಕೇ ಬೇಕು? ರಾಘವೇಂದ್ರ ತಮ್ಮ ಕಾಲೇಜು ಜಗ ಉಳಿಸಲು ಹೋರಾಟ ಮಾಡುತ್ತಿದ್ದಾರೆ ಅಷ್ಟೆ ಎಂದರು.

ರಾಘವೇಂದ್ರ, ಹಾಲಪ್ಪ, ಅರಗ ಜನೇಂದ್ರ, ಬೊಮ್ಮಾಯಿ ಅವರು ಮಲೆನಾಡಿನ ಪಾಪಿಗಳು ಎಂದು ಕಟುವಾಗಿ ಟೀಕಿಸಿದ ಶಾಸಕ ಬೇಳೂರು, ನಮ್ಮ ಸರ್ಕಾರ ಶರಾವತಿ ಸಂತ್ರಸ್ತ್ರರ ಪರವಾಗಿದೆ. ರೈತರನ್ನು ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ನಾವು ರೈತ ಜೊತೆಗಿದ್ದೇವೆ. ರೈತರ ಪರವಾಗಿ ನಮ್ಮ ಸರ್ಕಾರ ಎಂದಿಗೂ ಇರುತ್ತೆ ಎಂದು ಸ್ಪಷ್ಟಪಡಿಸಿದರು. ಮೂರು ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಆಯನೂರು ಮಂಜುನಾಥ್, ಶಂಕರಘಟ್ಟ ರಮೇಶ್, ಶಿ.ಜು. ಪಾಶಾ, ಜಿ. ಪದ್ಮನಾಭ್, ಸೋಮಶೇಖರ್, ಬಾಲಾಜಿ ಇದ್ದರು.

Leave a Reply

Your email address will not be published. Required fields are marked *