google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ನಗರದ ಸ್ಮಾರ್ಟ್ ಸಿಟಿ ಲಿಮಿಟೆಡ್ ಪಾರ್ಕಿಂಗ್ ಜಗದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರಿಗೆ ವಾಹನ ನಿಲ್ಲಿಸಲು ಸ್ಥಳವಕಾಶ ನೀಡಬೇಕು ಎಂದು ನಗರದ ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ನಗರದ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಅಯ್ಯಪ್ಪ ಸ್ವಾಮಿ ಮಾಲಾಧಿರಿಗಳಿಗೆ ಮಧ್ಯಾಹ್ನ ಅನ್ನದಾನದ ವ್ಯವಸ್ಥೆ ಇರುತ್ತದೆ. ನಿತ್ಯ ನೂರಾರು ಜನ ಭಕ್ತಾಧಿಗಳು ಬಂದು ಪ್ರಸಾದ ಸ್ವೀಕರಿಸುತ್ತಾರೆ. ಈ ಸಂದರ್ಭದಲ್ಲಿ ಅತಿ ಹೆಚ್ಚು ಮಾಲಾಧಿರಿಗಳು ದ್ವಿಚಕ್ರದಲ್ಲಿ ಬರುವುದರಿಂದ ವಾಹನಗಳನ್ನು ರಸ್ತೆಯ ಅಕ್ಕಪಕ್ಕದಲ್ಲಿ ನಿಲ್ಲಿಸುವಂತಾಗಿದ್ದು, ರಸ್ತೆಯು ಚಿಕ್ಕದಾಗಿರುವುದರಿಂದ ಭಕ್ತಾಧಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಸಮಸ್ಯೆ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ದೇವಸ್ಥಾನದ ಪಕ್ಕದಲ್ಲಿ ಇರುವ ಸ್ಮಾಟ್ ಸಿಟಿಯ ಉದ್ಯಾನವನದ ಪಾರ್ಕಿಂಗ್ ಸ್ಥಳದಲ್ಲಿ ಮಧ್ಯಾಹ್ನ ೧ರಿಂದ ೩ರ ತನಕ ಭಕ್ತಾಧಿಗಳಿಗೆ ವಾಹನ ನಿಲ್ಲಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದರು ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಈ ಕೂಡಲೇ ಭಕ್ತಾಧಿಗಳಿಗೆ ಹಾಗುತ್ತಿರುವ ತೊಂದರೆಯನ್ನು ನಿವಾರಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಸ್.ತಂಗರಾಜ್ ಎಸ್.ಡಿ.ಮಲ್ಲಿಕಾರ್ಜುನ ಸೇರಿದಂತೆ ಹಲವು ಭಕ್ತಾಧಿಗಳು ಇದ್ದರು.

Leave a Reply

Your email address will not be published. Required fields are marked *