google.com, pub-9939191130407836, DIRECT, f08c47fec0942fa0

ಹೈದರಾಬಾದ್ : – ಪುಷ್ಪಾ 2 ಚಿತ್ರದ ಯಶಸ್ಸಿನ ನಡುವೆಯೇ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಚೀಕಟಪಲ್ಲಿಯಲ್ಲಿ ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪುಷ್ಪ 2ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಹೈದರಾಬಾದ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಆ ವೇಳೆಯಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ, ರೇವತಿ (39) ಎಂಬ ಮಹಿಳೆ ನಿಧನ ಹೊಂದಿದ್ದರು. ಅವರ 9ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಸಹ ಆರೋಪಿಯಾಗಿದ್ದರು.

ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ.

ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಭಾರೀ ನಿರೀಕ್ಷೆ ಹುಟ್ಟಿಸಿದ್ದ ಪುಷ್ಪಾ ೨ಚಿತ್ರ ಅಪಾರವಾದ ಯಶಸ್ಸನ್ನು ಕಂಡಿದೆ. ಅದರ ಬೆನ್ನಲ್ಲೇ ಈ ದುರಂತ ನಡೆದಿರುವುದು, ಅಲ್ಲು ಅರ್ಜುನ್ ಬಂಧನವಾಗಿರುವುದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ.

Leave a Reply

Your email address will not be published. Required fields are marked *