google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಕ್ರೈಸ್ತ ಬಾಂಧವರು ಇಂದು ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಚರ್ಚ್, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ ನಗರ, ಸಾಗರ ಗೇಟ್ ಸಮೀಪಲ್ಲಿರುವ ಚರ್ಚ್, ಗೋಪಾಳದಲ್ಲಿರುವ ಚರ್ಚ್‌ನಲ್ಲು ವಿಶೇಷ ಪ್ರಾರ್ಥನೆ ನಡೆಯಿತು.

ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಚರ್ಚ್ಗಳನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಹಲವೆಡೆ ಮಾಡಲಾಗಿದ್ದ ವರ್ಣರಂಜಿತ ದೀಪಾಲಾಂಕರದ ವ್ಯವಸ್ಥೆ ಮನಸೂರಗೊಂಡಿತು. ಬೆಳಿಗ್ಗೆಯಿಂದಲೇ ಚರ್ಚ್‌ಗೆ ಆಗಮಿಸುತ್ತಿದ್ದ ಕ್ರಿಶ್ಚಿಯನ್ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮೇಣದ ಬತ್ತಿ ಹಚ್ಚಿ, ಇಷ್ಟಾರ್ಥ ಈಡೇರಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಿದರು.

ಕ್ರಿಸ್‌ಮಸ್ ಟ್ರೀ, ಏಸುವಿನ ಜನನ ಸಂದರ್ಭದ ಕ್ಷಣಗಳನ್ನು ನೆನಪಿಸುವ ಗೋದಲಿ ನೋಡುಗರ ಗಮನ ಸೆಳೆಯಿತು. ಮಂಗಳವಾರ ಮಧ್ಯರಾತ್ರಿ ಹಾಗೂ ಮುಂಜನೆ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತ ಧರ್ಮೀಯರು ಪಾಲ್ಗೊಂಡಿದ್ದರು.

ಚರ್ಚ್‌ಗಳಲ್ಲಿ ಕೇಕ್, ಚಾಕಲೇಟ್, ಸಿಹಿ ತಿಂಡಿ ಹಂಚಲಾಯಿತು. ಮನೆಯಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ ಹಬ್ಬದೂಟ ಮಾಡಲಾಯಿತು.

ಚರ್ಚ್‌ಗಳಲ್ಲಿ ಶುಭಾಶಯ ಗೀತೆಗಳು, ಕ್ರಿಸ್ತರ ಸ್ತುತಿಯ ಗೀತೆಗಳು ಸಾಮೂಹಿಕವಾಗಿ ಕೇಳಿಬಂದವು. ಚರ್ಚ್‌ನಲ್ಲಿ ಫಾದರ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಪ್ರಾರ್ಥನೆ ನಡೆಯಿತು.

ಕ್ರಿಸ್ತರ ಜನನದ ಶುಭ ಗಳಿಗೆಯ ಸ್ಮರಣೆಗೆ ಬೆಳಕಿನ ಸಂಕೇತವಾಗಿ ಮೇಣದ ಬತ್ತಿ ಬೆಳಗಿಸಲಾಯಿತು. ಪುಟ್ಟ ಮಕ್ಕಳು ಸಾಂತಾಕ್ಲಾಸ್ ಸೇರಿ ತರಹೇವಾರಿ ವೇಷ ಧರಿಸಿ ಗಮನ ಸೆಳೆದರು.

Leave a Reply

Your email address will not be published. Required fields are marked *