google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಜಿಲ್ಲೆಯ ಎಲ್ಲೆಡೆ ವೈಕುಂಠ ಏಕಾದಶಿಯ ಅಂಗವಾಗಿ ಶುಕ್ರವಾರ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಯಿತು. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆದಿರುತ್ತದೆ. ಸಾಕ್ಷತ್ ಶ್ರೀ ವಿಷ್ಣುವೇ ಧರೆಗಿಳಿದು ಬಂದು ಭಕ್ತರನ್ನು ಆಶೀರ್ವಾದಿಸುತ್ತಾನೆ ಎಂಬ ನಂಬಿಕೆ ಇದ್ದು, ಜನರು ಭಕ್ತಿಯಿಂದ ವೈಕುಂಠ ಏಕಾದಶಿ ಆಚರಿಸಿದರು. ಭಕ್ತರು ಸರತಿ ಸಾಲಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.

ಶಿವಮೊಗ್ಗದ ವೆಂಕಟೇಶ್ವರ ನಗರದ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಜಯನಗರದ ಶ್ರೀರಾಮ ಮಂದಿರ, ನವುಲೆಯ ವೆಂಕಟರಮಣ ದೇವಾಲಯ, ಕೋಟೆ ಶ್ರೀರಾಮಾಂಜನೇಯ ದೇವಾಲಯ, ಜಿ.ಎಸ್.ಕೆ.ಎಂ. ರಸ್ತೆಯ ವೆಂಕಟರಮಣ ದೇವಾಲಯ, ಅಶ್ವತ್ಥನಗರ, ದೇವಗಿರಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಸೇರಿ ಹಲವು ದೇವಾಲಯಗಳಲ್ಲಿ ವಿಶೇಷ ಅಲಂಕಾರದೊಂದಿಗೆ ಪೂಜೆ ನಡೆಯಿತು.

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನು ವೈಕುಂಠ ಏಕಾದಶಿ ಎನ್ನುತ್ತಾರೆ. ಶ್ರದ್ಧಾಭಕ್ತಿಯಿಂದ ಭಕ್ತರು ವಿಷ್ಣುವನ್ನು ಪೂಜಿಸುವ ಮಹತ್ವದ ದಿನವಿದು. ಈ ದಿನ ಏಕಾದಶಿ ವ್ರತ ಕೈಗೊಂಡು ದೇವರ ದರ್ಶನ ಪಡೆದಲ್ಲಿ ಮೋಕ್ಷ ಪ್ರಾಪ್ತಿ ಎಂಬ ಪ್ರತೀತಿ ಇದೆ.

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ಎಲ್ಲ ದೇವಾಲಯಗಳಲ್ಲೂ ಹಬ್ಬದ ವಾತಾವರಣ ಕಂಡು ಬಂದಿತು. ದೇವರ ದರ್ಶನದ ನಂತರ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಯಿತು.ಬೆಳಗಿನ ಜವದಿಂದಲೇ ದೇವಾಲಯಗಳಿಗೆ ಭಕ್ತರು ನೂರಾರು ಸಂಖ್ಯೆಯಲ್ಲಿ ಬಂದು ವಿಶೇಷ ಪೂಜೆ ಸಲ್ಲಿಸಿದರು. ವೈಕುಂಠ ಏಕಾದಶಿ ದಿನ ಭಕ್ತರ ಕೋರಿಕೆ ಈಡೇರಿಸಲು ಸಾಕ್ಷಾತ್ ವಿಷ್ಣುವೇ ಲಕ್ಷ್ಮೀ ಸಹಿತನಾಗಿ ಭೂಲೋಕಕ್ಕೆ ಬರುತ್ತಾನೆ ಎಂಬ ನಂಬಿಕೆ ಭಕ್ತ ಸಮೂಹದ್ದು. ಹೀಗಾಗಿ ದೇವರ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಹಲವು ದೇವಾಲಯಗಳಲ್ಲಿ ವೈಕುಂಠ ದ್ವಾರವನ್ನು ಸಿದ್ದಪಡಿಸಲಾಗಿತ್ತು. ವೆಂಕಟ ಅಂದರೆ ತೊಂದರೆಗಳನ್ನು ಸುಡುವವನು ಎಂದು ಅರ್ಥ ಈಗಾಗಿ ಜೀವನದಲ್ಲಿ ನಮಗೆ ಬಂದಿರುವ ಸಂಕಷ್ಟಗಳನ್ನು ದೂರ ಮಾಡಿ ನೆಮ್ಮದಿಯ ಬದುಕನ್ನು, ಸುಖ ಸಮೃದ್ಧಿಯನ್ನು ನೀಡುವಂತೆ ಭಕ್ತರು ದೇವರಿಗೆ ಮೊರೆ ಇಡುತ್ತಾರೆ. ವೈಕುಂಠ ಏಕದಶಿಯಂದು ನಿರಾಹಾರ ಆಚರಿಸಿದರೆ ಪುಣ್ಯ ಫಲ ಪ್ರಾಪ್ತಿ ಎಂಬ ಪ್ರತೀತಿ ಇದೆ. ಆಗಾಗಿ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಬೆಳಗ್ಗೆಯಿಂದಲೇ ನಗರದ ಬಹುತೇಕ ವೆಂಕಟೇಶ್ವರ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ನಗರದ ಹಲವಾರು ಭಜನಾ ಮಂಡಳಿಯಿಂದ ಎಲ್ಲಾ ದೇವಾಲಯಗಳಲ್ಲು ನಿರಂತರ ಭಜನೆ ನಡೆಯುತ್ತಿತ್ತು.

Leave a Reply

Your email address will not be published. Required fields are marked *