google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀ ನಾರಾಯಣ ಗುರು, ಶ್ರೀಮತಿ ಇಂದಿರಾಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ,ಪ.ವ., ಸಾಮಾನ್ಯ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಗಳ ಮೂಲಕ ಜ. 25ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವುದು. ಪ.ಜಾ., ಪ.ವ. ಹಾಗೂ ಹಿಂ.ವ. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ. 2.50 ಲಕ್ಷ, ಮತ್ತು ಹಿಂ.ವ. 2ಎ ,2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ. 1ಲಕ್ಷಗಳ ಮಿತಿಯೊಳಗಿರಬೇಕು.

ಪ್ರವೇಶ ಪರೀಕ್ಷೆಯು ಫೆ. 15ರಂದು ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಫೆ. 6ರಿಂದ ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-249241/080-23460460 ಅಥವಾ ಆಯಾ ತಾಲೂಕಿನ ಹತ್ತಿರದ ವಸತಿ ಶಾಲೆ, ಅಥವಾ http://kreis.kar.nic.in, http://kea.kar.nic.in ವೆಬ್‌ಸೈಟ್‌ಗಳ ಮಾಹಿತಿ ಪುಸ್ತಕ-2025ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *