google.com, pub-9939191130407836, DIRECT, f08c47fec0942fa0

ಬೀದರ್ :- ಇಲ್ಲಿನ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.

ಶಿವಾಜಿ ಚೌಕ್ ನಲ್ಲಿ ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.

ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗಿರಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆಯೇ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಕಲ್ಲು ತೂರಿ, ದುರ್ಷರ್ಮಿಗಳನ್ನು ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಅವರನ್ನು ಚಿಕಿತ್ಸೆಗಾಗಿ ಬೀದರ್​​ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಹ ಅಸುನೀಗಿದ್ದಾರೆ. ಸದ್ಯ ಆರೋಪಿಗಳಿಗಾಗಿ ಬೀದರ್ ಪೊಲೀಸರು ಬಲೆ ಬಿಸಿದ್ದಾರೆ. ಬೈಕ್ ವಾಹನದ ನಂಬರ್ ಟ್ರೇಸ್ ಮಾಡುತ್ತಿದ್ದಾರೆ.

ಎಟಿಎಂ ವಾಹನದಲ್ಲಿತ್ತು 87 ಲಕ್ಷ ರೂ...

ಎಟಿಎಂ ವಾಹನದಲ್ಲಿ ಒಟ್ಟು 87 ರೂ. ಲಕ್ಷ ಹಣ ಇದ್ದ ಬಗ್ಗೆ ಮಾಹಿತಿ ದೊರೆತಿದೆ. 5 ಲಕ್ಷ ರೂ. ನಗದು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 83 ಲಕ್ಷ ರೂ. ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.

Leave a Reply

Your email address will not be published. Required fields are marked *