google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಶೈಕ್ಷಣಿಕ ಕ್ಷೇತ್ರದಲ್ಲಿನ ಅನ್ಯಾಯ ಅದಕ್ಷತೆ ಹಾಗೂ ಶಿಥಿಲತೆಗಳ ವಿರುದ್ಧ ಹೋರಾಟಗಳ ಜೊತೆ ಹಲವಾರು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಅಭಾವಿಪ) ಕರ್ನಾಟಕ ದಕ್ಷಿಣ ವಿಭಾಗದ 44ನೇ ಪ್ರಾಂತ ಸಮ್ಮೇಳನವನ್ನು ಜ. 31, ಫೆ.1 ಮತ್ತು 2ರಂದು ಇಲ್ಲಿಯ ಅಲ್ಲಮಪ್ರಭು ಮೈದಾನದ (ಫ್ರೀಡಂ ಪಾರ್ಕ್) ಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎಸ್.ಎಸ್.ನಾಗರಾಜ್ ತಿಳಿಸಿದರು.

ಇಂದು ಸಮ್ಮೇಳನ ಸ್ಥಳದಲ್ಲಿ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,ಕಳೆದ 75 ವರ್ಷಗಳಿಂದ ಅಭಾವಿಪ ರಾಷ್ಟ್ರದ ಪುನರ್ ನಿರ್ಮಾಣ, ಏಕತೆ ಮತ್ತು ಸಮಗ್ರತೆಗೆ ಶ್ರಮಿಸುತ್ತಿರುವ ಜಗತ್ತಿನ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಜವಾಬ್ದಾರಿ ನಿರ್ವಹಿಸುತ್ತಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದರು.

ರಾಷ್ಟ್ರೀಯ ಜನ, ಆಧ್ಯಾತ್ಮಿಕ ಚಾರಿತ್ರ್ಯ, ಏಕತೆಯ ಆಧಾರದ ಮೇಲೆ ವ್ಯಕ್ತಿ ನಿರ್ಮಾಣ ಮಾಡುತ್ತ ಇಂದಿನ ವಿದ್ಯಾರ್ಥಿ ಇಂದಿನ ಪ್ರಜೆ ಎಂಬ ತತ್ವದಡಿ ಶೈಕ್ಷಣಿಕ ಕ್ಷೇತ್ರದಲ್ಲಿಪರಿವರ್ತನೆಯ ಪ್ರಯತ್ನ, ಪಕ್ಷ ರಾಜಕಾರಣದಿಂದ ಮೇಲೆ ರಾಷ್ಟ್ರ ರಾಜಕಾರಣದಲ್ಲಿ ಪಾಲ್ಗೊಳ್ಳುವ ರಾಷ್ಟ್ರ ಹಿತದ ರಾಜನೀತಿ, ರಚನಾತ್ಮಕ ಆಂದೋಲನ ಮೊದಲಾದವುಗಳ ಮೂಲಕ ವಿದ್ಯಾರ್ಥಿಯು ಯುವಶಕ್ತಿ ಆಗಬೇಕೆಂಬ ಹಿನ್ನೆಲೆಯಲ್ಲಿ ಈ ಸಮ್ಮೇಳನ ಆಯೋಜನೆ ಆಗಿದೆ ಎಂದರು.

ಸಮ್ಮೇಳನದಲ್ಲಿ ಧ್ವಜರೋಹಣ, ಶೈಕ್ಷಣಿಕ ಮತ್ತು ಸಾಮಾಜಿಕವಿಷಯಗಳ ಕುರಿತು ನಿರ್ಣಯಗಳು, ಸಮಾನಾಂತರ ಗೋಷ್ಠಿಗಳು, ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ, ಸಾರ್ವಜನಿಕ ಕಾರ್ಯಕ್ರಮ, ಸಾಂಸ್ಕತಿಕ ಕಾರ್ಯಕ್ರಮ, ಯುವ ಸಾಧಕರೊಂದಿಗೆ ಸಂವಾದ, ಯುವ ಪುರಸ್ಕಾರ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಈ ಸಮ್ಮೇಳನಕ್ಕೆ ದಕ್ಷಿಣ ಪ್ರಾಂತದ ಶಿವಮೊಗ್ಗ ಸೇರಿದಂತೆ ಉತ್ತರ ಕನ್ನಡ, ಉಡುಪಿ, ಮಂಗಳೂರು, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಂದ 1200 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಆಗಮಿಸಲಿದ್ದಾರೆ.

ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿಧಿಗಳ ಸಾರಿಗೆ-ಸಂಚಾರಗಳ ಅನುಕೂಲಕ್ಕಾಗಿ ಸ್ಥಳೀಯ ಶಿಕ್ಷಣ ಸಂಸ್ಥೆಗಳು ಸಹಕಾರ ನೀಡುತ್ತಿವೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಅಭಾವಿಪ ೪೪ನೇ ಪ್ರಾಂತೀಯ ಸಮ್ಮೇಳನ ನಡೆಯವ ಜಗದಲ್ಲಿ ಭೂಮಿ ಪೂಜೆ ನೆರವೇರಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಆರ್.ಎಸ್.ಎಸ್.ಪ್ರಮುಖ ಪಟ್ಟಾಭಿರಾಮ್, ಅಶೋಕ್ ಜಿ.ಭಟ್, ಎಸ್.ಎನ್.ನಾಗರಾಜ್, ಡಾ. ಕೆ.ಜೆ. ರತ್ನಕುಮಾರಿ,ಹೇಮಂತ್ ಗಿರೀಶ್ ಪಟೇಲ್, ಧರ್ಮಪ್ರಸಾದ, ರಮೇಶ್ ಹೆಗ್ಡೆ ಡಾ.ರವಿಕಿರಣ ಮೊದಲಾದವರಿದ್ದರು.

Leave a Reply

Your email address will not be published. Required fields are marked *