ಶಿವಮೊಗ್ಗ :- ಜಿಲ್ಲೆಯಲ್ಲಿ ಅಪಘಾತದಲ್ಲಿ ಪ್ರಸಕ್ತ ಸಾಲಿನಲ್ಲಿ 363 ಜನ ಪ್ರಾಣ ತೆತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದ್ದಾರೆ.
ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಅರಿವು ಮೂಡಿಸುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್, ಶಿವಮೊಗ್ಗ ನಗರ ಸಂಚಾರ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಇಂದು ಮತ್ತು ನಾಳೆ ಕೋಟೆ ಪೊಲೀಸ್ ಗೆಸ್ಟ್ ಹೌಸ್ ಆವರಣದಲ್ಲಿ ರಸ್ತೆ ಸಂಚಾರ ನಿಯಮಗಳ ಜಗೃತಿ ಪ್ರದರ್ಶನ 2025 ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಈ ಜಗೃತಿ ಪ್ರದರ್ಶನದಲ್ಲಿ ವಾಹನಗಳ ತರಬೇತಿಯಿಂದ ಹಿಡಿದು ಸಂಚಾರಿ ನಿಯಮಗಳ ಪಾಲನೆಯ ವಿವಿಧತೆಗಳನ್ನು ಮತ್ತು ಅಪಘಾತ ಸಂಭವಿಸಿದಾಗ ಆಗುವ ಪರಿಣಾಮ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಅಪಘಾತ ತಡೆಗಟ್ಟಲು ವಹಿಸಬೇಕಾದ ಕ್ರಮಗಳ ಬಗ್ಗೆ ಜಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಐಎಸ್‌ಐ ಮಾರ್ಕ್‌ನ ಹೆಲ್ಮೆಟ್ ಧರಿಸಬೇಕು. ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಸೀಟ್ ಬೆಲ್ಟ್ ಅನ್ನು ಕಡ್ಡಾಯವಾಗಿ ಧರಿಸಬೇಕು. ವಿದ್ಯಾರ್ಥಿಗಳು 18 ವರ್ಷಕ್ಕಿಂತ ಕೆಳಗಿನವರು ವಾಹನ ಚಲಾಯಿಸುವಂತಿಲ್ಲ. ತ್ರಿಬಲ್ ರೇಡ್ ಮಾಡುವ ಹಾಗಿಲ್ಲ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವಂತಿಲ್ಲ. ನಿಯಮಗಳನ್ನು ಉಲ್ಲಂಘಿಸಿದಾಗ ಆಗುವ ಅನಾಹುತಗಳ ಬಗ್ಗೆ ಈ ಪ್ರದರ್ಶಿನಿಯಲ್ಲಿ ವಿವರಿಸಲಾಗಿದೆ. ಅಲ್ಲದೇ ಟ್ರಾಫಿಕ್ ನಿಯಮಗಳ ಫಲಕಗಳನ್ನು ಪ್ರದರ್ಶಿಸಲಾಗಿದೆ.
ಈ ಸಂಚಾರಿ ಅರಿವು ಕಾರ್ಯಕ್ರಮದ ಉಪಯೋಗವನ್ನು ಸಾರ್ವಜನಿಕರು ವಿದ್ಯಾರ್ಥಿಗಳು ಹಾಗೂ ಯುವ ಜನತೆ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು. ಈ ಸಂದರ್ಭದಲ್ಲಿ ಸಂಚಾರಿ ಪೊಲೀಸರು ವಿದ್ಯಾರ್ಥಿಗಳು ಇನ್ನಿತರರು ಭಾಗವಹಿಸಿದ್ದರು.
