google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಬಸ್ ಅಪಘಾತದಲ್ಲಿ ನಗರದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ನಡೆದಿದೆ.

ಬೆಳಗ್ಗೆ ನಗರ ಸಾರಿಗೆ ಖಾಸಗಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದು, ಆಯತಪ್ಪಿ ಕೆಳಗೆ ಬಿದ್ದಿದ್ದಾನೆ.

ಈ ವೇಳೆ ಅದೇ ಬಸ್ ನ ಹಿಂಬದಿ ಚಕ್ರ ಆತನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಶಾಂತಮ್ಮ ಲೇಔಟ್ ನಿವಾಸಿ ಎನ್ನಲಾಗಿದೆ. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *