google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ಎಲ್ಲ ವರ್ಗದ ಸಮು ದಾಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಚ್. ಸುನೀಲ್ ತಿಳಿಸಿದ್ದಾರೆ.

ಸರ್ವಜನಾಂಗದ ಅಭಿವೃದ್ಧಿಯ ಬಜೆಟ್ ಇದಾಗಿದೆ. ಬಜೆಟ್‌ನಲ್ಲಿ ಎಲ್ಲ ಸಮುದಾಯಗಳಿಗೂ ಆದ್ಯತೆ ನೀಡಲಾಗಿದೆ. ಸಾಮಾಜಿಕ ಕಳಕಳಿ ಹೊಂದಿರುವ ಕಲ್ಯಾಣ ಕಾರ್ಯಕ್ರಮ ಗಳನ್ನು ಜರಿಗೊಳಿಸಲಾಗಿದೆ. ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ದಿಕ್ಸೂಚಿಯಾಗಿ ಹೊರ ಹೊಮ್ಮಲಿದೆ. ಎಲ್ಲ ವರ್ಗದವರಿಗೂ ಯೋಜನೆಗಳು ತಲುಪಲಿವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಪರಿಪೂರ್ಣ ಬಜೆಟ್ ಮಂಡಿಸಿದ್ದು, ಕೃಷಿ, ನೀರಾವರಿ, ಮೂಲ ಸೌಕರ್ಯ, ಕೈಗಾರಿಕಾ, ವಾಣಿಜ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆ ನಾಡಿನ ಲಕ್ಷಾಂತರ ಕುಟುಂಬಗಳಿಗೆ ಹಾಗೂ ಎಲ್ಲ ವರ್ಗದ ಜನರಿಗೂ ತಲುಪುತ್ತಿವೆ ಎಂದು ತಿಳಿಸಿದ್ದಾರೆ.ಱಎಲ್ಲ ಭರವಸೆಗಳನ್ನು ಈಡೇರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿಗಳಿಗೆ ಅನುದಾನ ಮುಂದುವರೆಸುವ ಜತೆಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *