ಶಿವಮೊಗ್ಗ :- ಹೋಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವ ಉದ್ಯಮಿಗಳು ಸಾರ್ವಜನಿಕರ ಆರೋಗ್ಯ ಕಾಪಾಡಬೇಕು. ಉತ್ತಮ ಆಹಾರ ಪದಾರ್ಥಗಳನ್ನು ನೀಡಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ, ಹೋಟೆಲ್ ಮಾಲೀಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್‍ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಹಾರ ಉದ್ಯಮಿದಾರರು ಫೋಸ್ಟಕ್ ತರಬೇತಿ ಪಡೆದುಕೊಳ್ಳಬೇಕು. ಇದರಿಂದ ಹೋಟೆಲ್ ಉದ್ಯಮಿದಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಯಲ್ಲಿ ಒಳ್ಳೆಯ ಆಹಾರ ನೀಡಲು ಸಾಧ್ಯವಿದೆ ಎಂದು ತಿಳಿಸಿದರು.
ಹೋಟೆಲ್ ಮಾಲೀಕರ ಸಂಘದ ಕಾರ್‍ಯದರ್ಶಿ ಗೋಪಿನಾಥ್ ಮಾತನಾಡಿ, ಹೋಟೆಲ್ ಮಾಲೀಕರು ಆಹಾರ ಸುರಕ್ಷತಾ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಆಹಾರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರ ನಾರಾಯಣ ಹೊಳ್ಳ ಅವರು, ಆಹಾರ ಸುರಕ್ಷತೆ ಅಧಿಕಾರಿಗಳು ಹೋಟೆಲ್ ಉದ್ಯಮಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ವಿವರಣೆ ನೀಡಿದರು.
ಆಹಾರ ಸುರಕ್ಷತೆ ಅಧಿಕಾರಿ ಸೋಮೇಶ್, ವಿಜಯಕುಮಾರ್, ದಿನಕರ್, ಮಣಿಗೌಂಡರ್, ಧರ್ಮಣ್ಣ, ಅಶೋಕ್, ರಮೇಶ್, ಫೋಸ್ಟಕ್ ಜಿಲ್ಲಾ ಸಂಯೋಜಕ ಬಿ.ಟಿ.ಹನುಮಂತಯ್ಯ, ನೂರಾರು ಜನರು ಹೋಟೆಲ್ ಮಾಲೀಕರು, ನಿರ್ವಾಹಕರು, ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.
