
ಶಿವಮೊಗ್ಗ :- ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಆರೋಪಿ ನಝರುಲ್ಲಾ ಕಾಲಿಗೆ ಪೊಲೀಸರ ಗುಂಡು ಹಾರಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ತೆರಳಿದ್ದರು.
ಈ ವೇಳೆ ಆರೋಪಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಗಾಂಜಾ ಪ್ರಕರಣ ದಾಖಲಾಗಿತ್ತು.