
ಶಿವಮೊಗ್ಗ :- ಸಚಿವ ಮಧು ಬಂಗಾರಪ್ಪ ಹೊಸನಗರ ಪ್ರಗತಿ ಪರಿಶೀಲನ ಸಭೆಗೆ ಹೋಗುವ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಧನ ಸಹಾಯದೊಂದಿಗೆ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಸೊರಬ ತಾಲೂಕಿನ ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದ ಘಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿ, ಗಾಯಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು.
ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ತಮ್ಮ ಆಪ್ತ ಸಹಾಯಕನನ್ನು ಆಸ್ಪತ್ರೆಗೆ ಕಳುಹಿಸಿ ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದರು.
