google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆಯ ಮಹಾನಗರ ಪಾಲಿಕೆಗೆ ಸೇರಿದ ಆಟದ ಮೈದಾನವನ್ನು ಮುಸ್ಲಿಂ ಸಮುದಾಯದ ಹೋರಾಟಕ್ಕೆ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಇದು ವಿವಾದಿತ ಸ್ಥಳವಾಗಿದ್ದು, ಪರಿಶೀಲನೆ ನಡೆಯುತ್ತಿದೆ. ತನಿಖೆ ಮುಂದುವರೆದಿದೆ. ಈ ಹಂತದಲ್ಲಿ ಯಾವುದೇ ಕಾರಣಕ್ಕೂ ಇಲ್ಲಿ ಪ್ರತಿಭಟನೆ ಅಥವಾ ಇನ್ನಿತರ ಉದ್ದೇಶಗಳಿಗೆ ನೀಡಬಾರದು ಎಂದು ಆಗ್ರಹಿಸಿ ರಾಷ್ಟ್ರಭಕ್ತ ಬಳಗದಿಂದ ಪಾಲಿಕೆ ಆಯುಕ್ತರಿಗೆ ಇಂದು ಮನವಿ ಸಲ್ಲಿಸಲಾಯಿತು.

ಈ ಮೈದಾನ ಪಾಲಿಕೆಯ ಸಂಪೂರ್ಣ ಒಡೆತನಕ್ಕೆ ಒಳಪಟ್ಟ ಆಸ್ತಿಯಾಗಿದ್ದು, ಸದರಿ ಜಗವನ್ನು ಸಾರ್ವಜನಿಕ ಉಪಯೋಗಕ್ಕೆ ಮಾತ್ರ ಅನುವು ಮಾಡಿ ಕೊಡತಕ್ಕದ್ದು, ಸದರಿ ಜಗದ ಖಾತೆಯನ್ನು ನಿಯಮ ಬಾಹಿರವಾಗಿ ಮಾಡಲಾಗಿದ್ದು, ತಕ್ಷಣ ಈ ಖಾತೆಯನ್ನು ರದ್ದುಪಡಿಸಿ ಪಾಲಿಕೆ ಈ ಸ್ವತ್ತನ್ನು ತನ್ನ ವಶಕ್ಕೆ ಪಡೆಯಬೇಕು. ಕೆಲವು ದುಷ್ಕರ್ಮಿಗಳು ರಾತ್ರೋರಾತ್ರಿ ಬೇಲಿ ಹಾಕಿ ನಗರದಲ್ಲಿ ಪ್ರಕ್ಷುಬ್ದ ವಾತಾವರಣಕ್ಕೆ ಕಾರಣರಾಗಿದ್ದರು. ಮತ್ತು ಆ ಬೇಲಿ ಹಾಕಲು ರೈಲ್ವೆ ಇಲಾಖೆಯ ಕಂಬಿಗಳನ್ನು ಅಕ್ರಮವಾಗಿ ಬಳಸಿದ್ದರು. ಭಾರತ ಸರ್ಕಾರದ ಆಸ್ತಿಯನ್ನು ಕದ್ದು ತಂದಿರುವುದು ಗಂಭೀರ ಪ್ರಕರಣವಾಗಿದ್ದು, ಕೂಡಲೇ ಸ್ವಯಂ ಪ್ರೇರಿತರಾಗಿ ಜಿಲ್ಲಾ ರಕ್ಷಣಾಧಿಕಾರಿಗಳು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ಇಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ನೀಡಬಾರದು, ನೀಡಿದರೆ ಮುಂದಿನ ಹೋರಾಟಕ್ಕೆ ರಾಷ್ಟ್ರ ಭಕ್ತರ ಬಳಗ ಸಿದ್ಧವಾಗಿದೆ. ಆದ್ದರಿಂದ ಶಾಂತಿಯನ್ನು ಕಾಪಾಡುವಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ರಾಷ್ಟ್ರಭಕ್ತರ ಬಳಗ ಮನವಿ ಸಲ್ಲಿಸಿದೆ.

ಮನವಿ ಸಂದರ್ಭದಲ್ಲಿ ಬಳಗದ ಸಂಚಾಲಕರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಪ್ರಮುಖರಾದ ಕೆ.ಈ.ಕಾಂತೇಶ್, ಎಂ.ಶಂಕರ್ ಬಾಲು, ಮೋಹನ್‌ಜಧವ್, ಕುಪೇಂದ್ರ, ಸೀತಾಲಕ್ಷ್ಮೀ, ಈ.ವಿಶ್ವಾಸ್, ಶಿವಾಜಿ ಸೇರಿದಂತೆ ರಾಷ್ಟ್ರಭಕ್ತ ಬಳಗದ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *