google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ. ದೇಶದಲ್ಲಿ ಮಾತು ಕೊಟ್ಟ ಹಾಗೆ ನಡೆದ ಯಾವುದಾದರೊಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಇಂದು ನಗರದ ಬಂಜಾರ ಕನ್ವೆನ್ಷನ್ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಯುವ ನಾಯಕತ್ವ ಸಮಾವೇಶ, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.

ರಾಜ್ಯದ ಜನರಿಗೆ ಭೂ ಹಕ್ಕು ಕೊಟ್ಟಿದ್ದು, ಉಚಿತ ವಿದ್ಯುತ್ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದ ಅಭಿವೃದ್ಧಿಗೆ, ಕೃಷಿ ಬೆಳವಣಿಗೆಗೆ, ಜಿಡಿಪಿ ಬೆಳವಣಿಗೆಗೆ ಕಾಂಗ್ರೆಸ್ ಅನೇಕ ಕೊಡುಗೆಗಳನ್ನು ಕಾಂಗ್ರೆಸ್ ನೀಡಿದೆ. ರಾಜ್ಯ ಸರ್ಕಾರ ಕೊಡುತ್ತಿ ರುವ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಗಂಟೆ ಬಾರಿಸುತ್ತಿದೆ. ಆದರೆ ದೇವಾಲಯಗಳಲ್ಲಿ ಗಂಟೆ ಹೊಡೆಯುತ್ತಾರೋ ಗೊತ್ತಿಲ್ಲ. ಉಚಿತ ಮೊಟ್ಟೆ, ಹಾಲು, ಬೂಟು, ಶಿಕ್ಷಣ ಎಲ್ಲವನ್ನೂ ನೀಡಿ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಇದನ್ನು ಪಕ್ಷದ ಯುವಕರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಿಸಿ ಜನಪರ ಧ್ವನಿಯಾಗಬೇಕು. ನಿಮಗೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದರು.ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮಾತನಾಡಿ, ಇಂದಿನ ಕಾರ್ಯಕ್ರಮ ಅದೆಷ್ಟೋ ಯುವಕರಿಗೆ ದಾರಿದೀಪ ವಾಗಬೇಕು. ಹಿಂದೆ ಕಾಂಗ್ರೆಸ್‌ನಲ್ಲಿ ಪಕ್ಷದ ನಾಯಕರೇ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಈಗ ಚುನಾವಣೆಗಳ ಮೂಲಕ ನೀವು ಗೆದ್ದು ಯುವ ನಾಯಕರಾಗಿದ್ದೀರಿ. ಈಗ ನಿಮ್ಮ ಸಾಮರ್ಥ್ಯ ತೋರಿಸಿ ಪಕ್ಷ ಬಲಪಡಿಸಿ. ಕೇವಲ ಲೆಟರ್‌ಹೆಡ್ – ವಿಸಿಟಿಂಗ್ ಕಾರ್ಡ್‌ಗೆ ಅಧಿಕಾರ ಸೀಮಿತಗೊಳಿಸಬೇಡಿ ಎಂದರು.

ಬಿ.ವಿ. ಶ್ರೀನಿವಾಸ್ ಅವರು ಮಾತನಾಡಿ, ಸಂವಿಧಾನ ಉಳಿಸಲು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು 151 ದಿನ 4500 ಕಿಮೀ ದೇಶದಲ್ಲಿ ಪಾದಯಾತ್ರೆ ಮಾಡಿದರು. ದೇಶದ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿದ ಪಕ್ಷ ಕಾಂಗ್ರೆಸ್ ಆಗಿದೆ. ಬಿಜೆಪಿಯವರು ಸುಳ್ಳಿನ ಮೇಲೆ ಪಕ್ಷ ಕಟ್ಟುತ್ತಾರೆ. ಶವದ ಮೇಲೆ ರಾಜ ಕೀಯ ಮಾಡುತ್ತಾರೆ. ಮೊದಲು ಸುಳ್ಳನ್ನೇ ಹೇಳುತ್ತಾ ಬಂದ ಅಮಿತ್ ಶಾ ಮತ್ತು ಮೋದಿ ಅವರ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಲಿ ಎಂದು ಸವಾಲು ಹಾಕಿದರು.

ರಾಜ್ಯ ಕಾಂಗ್ರೆಸ್ ನಲ್ಲಿ ಗೆದ್ದ 136 ಶಾಸಕರಲ್ಲಿ ಶೇ. 70ರಷ್ಟು ಅಧಿಕ ನಾಯಕರು ಯುವ ಕಾಂಗ್ರೆಸ್ ನಿಂದಲೇ ಬಂದವರಾಗಿದ್ದಾರೆ. ಪ್ರತಿ ಬೂತ್‌ನಿಂದ ಓರ್ವ ಮೇಧಾವಿ ಡಿಜಿಟಲ್ ಯುವಕನನ್ನು ಗುರುತಿಸಿ ಆತನ ಮೂಲಕ ಪಕ್ಷದ ಎಲ್ಲಾ ಜನಪರ ಸಾಧನೆಗಳನ್ನು ತಿಳಿಸುವ ಕಾರ್ಯ ಮಾಡಬೇಕು ಎಂದರು. ಬಿಜೆಪಿಯವರು ಸುಳ್ಳು ಹೇಳಲೆಂದೇ ಯುವಕರ ವಾಟ್ಸಾಪ್ ಯುನಿವರ್ಸಿಟಿಯನ್ನೇ ತೆರೆದಿದ್ದಾರೆ. ನಾವು ನಮ್ಮ ಕೆಲಸವನ್ನು ಹೇಳಿ ಸತ್ಯವನ್ನೇ ಜನರಿಗೆ ತಲುಪಿಸುವ ಕಾರ್ಯ ಮಾಡೋಣ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ವಿಧಾನಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ಪ್ರಮುಖರಾದ ಹೆಚ್.ಎಸ್. ಸುಂದರೇಶ್, ರವಿಕುಮಾರ್, ಪಲ್ಲವಿ, ಆಯನೂರು ಮಂಜುನಾಥ್, ಶ್ರೀನಿವಾಸ ಕರಿಯಣ್ಣ, ಹೆಚ್.ಸಿ. ಯೋಗೀಶ್, ಎನ್. ರಮೇಶ್, ಎಂ. ಶ್ರೀಕಾಂತ್, ಗೋಣಿ ಮಾಲತೇಶ್, ಮಧು ಸೂದನ್, ವಿಜಯಕುಮಾರ್ (ದನಿ), ವೇದಾ ವಿಜಯಕುಮಾರ್, ಚೇತನ್, ಯಮುನಾ ರಂಗೇಗೌಡ ಮೊದಲಾದವರಿದ್ದರು.

Leave a Reply

Your email address will not be published. Required fields are marked *