google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಅವಧಿ ಮುಗಿದಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯನ್ನು ಆದ್ಯತೆ ಮೇರೆಗೆ ಅತಿ ಶೀಘ್ರದಲ್ಲೇ ನಡೆಸಬೇಕು ಎಂದು ಇಂದು ಶಿವಮೊಗ್ಗಕ್ಕೆ ಭೇಟಿ ನೀಡುರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಗೆ ರಾಷ್ಟ್ರಭಕ್ತರ ಬಳಗ ಮನವಿ ಸಲ್ಲಿಸಿದೆ.

ಮಹಾನಗರ ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದು ಎರಡು ವರ್ಷಗಳಾಗಿದ್ದು, ಚುನಾಯಿತ ಪ್ರತಿನಿಧಿಗಳಿಲ್ಲದೇ ನಗರದ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ, ರಾಜ್ಯ ಸರ್ಕಾರ ಸಕಾರಣಗಳನ್ನು ನೀಡದೇ ಅವಧಿ ಮುಗಿದಿರುವ ಪಾಲಿಕೆಗಳ ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ. ಈ ವಿಚಾರವಾಗಿ ಹೈಕೋರ್ಟ್ ಆದೇಶವಿದ್ದರೂ ಸಹ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವುದು ಪ್ರಜಾಪ್ರಭುತ್ವ ತತ್ವಕ್ಕೆ ಮಾಡಿರುವ ಘೋರ ಅಪಚಾರವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ತಾವು ಪತ್ರಿಕಾಗೋಷ್ಠಿ ನಡೆಸಿ ನ್ಯಾಯಾಲಯದ ಆದೇಶಾನುಸಾರ ಅವಧಿ ಮುಗಿದ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವುದಾಗಿ ಹೇಳಿದ್ದೀರಿ. ಆದ್ದರಿಂದ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆಯಂತಹ ಆಡಳಿತಾತ್ಮಕ ತೊಡಕುಗಳನ್ನು ಪರಿಗಣಿಸಿ ಹಾಗೂ ಹೈಕೋರ್ಟ್ ಆದೇಶವನ್ನು ಗಮನದಲ್ಲಿರಿಸಿ ಪಾಲಿಕೆಗಳಲ್ಲಿ ಪ್ರಜಾಪ್ರತಿನಿಧಿಗಳ ಆಡಳಿತಕ್ಕೆ ಅತಿ ಶೀಘ್ರದಲ್ಲಿ ಅನುವು ಮಾಡಿಕೊಡು ವಂತೆ ಒತ್ತಾಯಿಸಲಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದೇ ಆಡಳಿತ ವರ್ಗದ ಬೇಜವಾಬ್ದಾರಿ ನಡವಳಿಕೆಯಿಂದ ಆಡಳಿತ ಸಂಪೂರ್ಣ ನಿಷ್ಕ್ರಿಯ ಗೊಂಡಿದೆ. ನಗರದ ನೈರ್ಮಲ್ಯ ಸಂಸ್ಥೆ, ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಹಾಗೂ ಜನಸಾಮಾನ್ಯರ ಕುಂದು ಕೊರತೆಗಳಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೇ ಸಣ್ಣ ಪುಟ್ಟ ಕೆಲಸಗಳಿಗೆ ಕಚೇರಿಗಳಿಗೆ ಅಲೆಯುವಂತಾಗಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟು ಕೊಂಡು ಶೀಘ್ರವೇ ಚುನಾವಣೆ ನಡೆಸುವುದರ ಮೂಲಕ ನಗರದ ಅಭಿವೃದ್ಧಿಗೆ ಹಾಗೂ ಶ್ರೀ ಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ರಾಷ್ಟ್ರಭಕ್ತರ ಬಳಗದ ಕೆ.ಈ. ಕಾಂತೇಶ್, ಪ್ರಮುಖರಾದ ಎಂ. ಶಂಕರ್, ಸುವರ್ಣಾ ಶಂಕರ್, ಲಕ್ಷ್ಮಿ ಶಂಕರನಾಯ್ಕ್, ಆರತಿ ಆ.ಮ. ಪ್ರಕಾಶ್, ಇ. ವಿಶ್ವಾಸ್, ಅನಿತಾ ರವಿಶಂಕರ್, ಸೀತಾಲಕ್ಷ್ಮಿ, ಆಶಾ ಚನ್ನಬಸಪ್ಪ, ಎಸ್.ಟಿ.ಡಿ. ರಾಜು, ಮೋಹನ್ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *