google.com, pub-9939191130407836, DIRECT, f08c47fec0942fa0

ಬೆಂಗಳೂರು :- ಐಪಿಎಲ್ -2025ನ್ನು ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಸಂಜೆ 6ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್‌ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ.

ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು. ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಆರ್‌ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್‌ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್‌ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಶಾಲೆ-ಕಾಲೇಜುಗಳಿಗೆ ರಜೆ

ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಹೇಳಿಕೆ ನೀಡಿದ್ದು, ವಿಧಾನಸೌಧದ ಮುಂದೆ ಆರ್‌ಸಿಬಿ ಟೀಂಗೆ ಸರ್ಕಾರದಿಂದ ಸನ್ಮಾನ, ಪ್ರೋತ್ಸಾಹ ನೀಡಲಾಗುತ್ತದೆ. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟವಾಗುವ ಸಾಧ್ಯತೆ ಇದ್ದು, ಮಧ್ಯಾಹ್ನದ ಬಳಿಕ ಶಾಲಾ-ಕಾಲೇಜಿಗೆ ರಜೆ ನೀಡಲು ಸೂಚಿಸಲಾಗಿದೆ ಎಂದರು.

Leave a Reply

Your email address will not be published. Required fields are marked *