
ಬೆಂಗಳೂರು :- 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಶಾಲಾ ಶಿಕ್ಷಣ ಮತ್ತುಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದ್ದು, ಈ ಫಲಿತಾಂಶವು ರಾಜ್ಯ ಸರ್ಕಾರ ಜರಿಗೆ ತಂದಿರುವ ಮೂರು ಪರೀಕ್ಷಾಪದ್ಧತಿಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದ್ದಾರೆ.
೨೦೨೫ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿಸರ್ಕಾರಿ ಶಾಲೆಗಳ ಉತ್ತೀರ್ಣತಾ ಪ್ರಮಾಣ ಶೇ. 36.65 ಇದ್ದು, ಇದು ಅನುದಾನಿತ ಮತ್ತುಅನುದಾನರಹಿತ ಶಾಲೆಗಳ ಫಲಿತಾಂಶಕ್ಕಿಂತ ಹೆಚ್ಚಾಗಿದೆ. ಇದು ನಮ್ಮ ಸರ್ಕಾರಿ ಶಾಲೆಗಳ ಶಿಕ್ಷಕರ ಮತ್ತುವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆಸಿಕ್ಕ ಪ್ರತಿಫಲವಾಗಿದೆ ಎಂದು ಹೇಳಿದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಂತೆ, ಈ ಹಿಂದೆ ನಡೆಸಿದ ಪಿಯುಸಿ ಪರೀಕ್ಷೆ-೨ ಕೂಡ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವ್ಯಾಸಂಗವನ್ನುಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇಮುಂದುವರಿಸಲು ನೆರವಾಗಿದೆ ಎಂದರು.
ವಿದ್ಯಾರ್ಥಿಗಳ ಭವಿಷ್ಯವನ್ನುಉತ್ತಮಗೊಳಿಸಲು ಮತ್ತು ಅವರಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ನಾವು ಜರಿಗೆ ತಂದಿರುವ ಮೂರು ಪರೀಕ್ಷಾ ಪದ್ಧತಿಗಳು ಉತ್ತಮ ಫಲಿತಾಂಶ ನೀಡಿದೆ ಎಂದು. ಸಚಿವರು ಸಂತಸ ವ್ಯಕ್ತಪಡಿಸಿದರು.
ಅಜೀಂ ಪ್ರೇಮ್ ಜಿ ಸಂಸ್ಥೆಯ ಸಿ.ಇ.ಒ. ಅನುರಾಗ್ ಬೆಹರ್ ಅವರು ಕರ್ನಾಟಕದಲ್ಲಿ ಜಾರಿಗೆ ತಂದಿರುವ ಮೂರು ಪರೀಕ್ಷಾಪದ್ಧತಿ, ವೆಬ್ ಕಾಸ್ಟಿಂಗ್ ದೇಶಕ್ಕೆ ಮಾದರಿ, ಪ್ರತಿಭಾವಂತರನ್ನುರೂಪಿಸಲು ಪರೀಕ್ಷಾಭಯ ಹೋಗಲಾಡಿಸಲು ಸಹಕಾರಿಯಾಗಿವೆ ಎಂದು ಮಧು ಬಂಗಾರಪ್ಪ ತಿಳಿಸಿದರು.
