google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸಾಗುವ ಹಾದಿಗೆ ನಿರ್ಮಾಣ ಮಾಡಿರುವ ನೂತನ ಸಿಗಂಧೂರು ಸೇತುವೆ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

ನವನವೀನ ತಂತ್ರಜನ ಹಾಗೂ ಆಧುನಿಕ ತಾಂತ್ರಿಕ ವ್ಯವಸ್ಥೆಯಿಂದ ಅತ್ಯಂತ ಅಚ್ಚುಕಟ್ಟಾಗಿ ಸುಮಾರು 4.30ಕೋಟಿ ಅನುದಾನದಲ್ಲಿ ರಾಜ್ಯದ ಅತಿ ಉದ್ದದ 2.25 ಕಿ.ಮೀ. ಕೇಬಲ್ ಆಧಾರಿತ ಸೇತುವೆ ಕಾಮಗಾರಿ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಜಗಿದೆ.

ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ದೆಹಲಿಯಲ್ಲಿ ಭೇಟಿಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.

ಈ ಐತಿಹಾಸಿಕ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಿದವರಲ್ಲಿ ಮೊದಲಿಗರಾದ ಬಿ.ಎಸ್. ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸುತ್ತಾ, ಇದೇ ಸಂದರ್ಭದಲ್ಲಿ ಈ ಯೋಜನೆಗೆ ಸೂಕ್ತ ಅನುದಾನ ನೀಡಿದ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಹಾಗೂ ಸಚಿವ ನಿತಿನ್ ಗಡ್ಕರಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅನಂತ ಅನಂತ ಧನ್ಯವಾದ ಅರ್ಪಿಸುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಈ ಒಂದು ಇತಿಹಾಸ ಪುಟಗಳಲ್ಲಿ ದಾಖಲಾಗುವಂತಹ ಐತಿಹಾಸಿಕ ಸೇತುವೆ ನಿರ್ಮಾಣದಿಂದ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಮೆರುಗು ದೊರೆಯುತ್ತದೆ. ಜೊತೆಗೆ ವ್ಯಾವಹಾರಿಕವಾಗಿ ಜಿಲ್ಲೆಯ ಆರ್ಥಿಕ ಪರಿಸ್ಥಿತಿ ಸದೃಢವಾಗುತ್ತದೆ. ಈ ಮೂಲಕ ಹೊಸ ರೀತಿಯ ಸಾಮಾಜಿಕ ಬದಲಾವಣೆಗೆ ಮುನ್ನುಡಿ ಬರೆಯುತ್ತದೆ ಎಂಬ ವಿಶ್ವಾಸ ಬಲವಾಗಿದೆ.

Leave a Reply

Your email address will not be published. Required fields are marked *