
ತೀರ್ಥಹಳ್ಳಿ :- ಇಂದು ಮಧ್ಯಾಹ್ನ ಲಾರಿ ಹಾಗೂ ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ತೂದೂರು ಗ್ರಾಪಂ ವ್ಯಾಪ್ತಿಯ ಬೇಗುವಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಭಿಕರವಾಗಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ಶಬ್ದಕ್ಕೆ ಸುತ್ತ ಮುತ್ತಲಿನ ಗ್ರಾಮಸ್ಥರು ಸ್ಥಳಕ್ಕಗಮಿಸಿ ಅ್ಯಂಬುಲೆನ್ಸ್ ಗೆ ಕರೆಮಾಡಿ, ಗಾಯಾಳುಗಳನ್ನು ರಕ್ಷಿಸಿದಗದಾರೆ.
ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಇಬ್ಬರಿಗೂ ಮಕ್ಕಳು ಕೂಡ ಇದ್ದರು ಎಂದು ತಿಳಿದುಬಂದಿದೆ. ಮಕ್ಕಳಿಗೆ ಹಾಗು ಉಳಿದ ಮೂವರಿಗೂ ಗಾಯಗಳಾಗಿವೆ.
ಸ್ಥಳಕ್ಕಾಗಮಿಸಿದ ಮಾಳೂರು ಠಾಣೆ ಪೊಲೀಸರು ಪರಿಶೀಲನೆನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ.