google.com, pub-9939191130407836, DIRECT, f08c47fec0942fa0

ನವದೆಹಲಿ :- ಕರ್ನಾಟಕದ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾರಣಗಳಿಂದ ಸಾವಿನ ಸಂಖ್ಯೆ ಅಧಿಕವಾಗಿ ಸಂಭವಿ ಸಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಹ ವ್ಯಕ್ತಪಡಿಸಿರುವು ದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಅಖಿಲ ಭಾರತ ವೈದ್ಯಕೀಯ ವಿಜನ ಸಂಸ್ಥೆ, ಹೃದಯಾಘಾತ ಸಾವುಗಳಿಗೂ – ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ (AIIMS) ಸಂಸ್ಥೆ ಸ್ಪಷ್ಟನೆ ನೀಡಿದೆ.

ಈ ಎರಡೂ ಸಂಸ್ಥೆಗಳು ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾ ವೈರಸ್ ಲಸಿಕೆಗಳು ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್ ಸೋಂಕಿನ ಸಮಯದಲ್ಲಿ ಜನರಿಗೆ ಕೋವಿಡ್ ಲಸಿಕೆಯನ್ನು ಆತುರವಾಗಿ ನೀಡಿದ್ದೆ ಜನರು ಇಂದು ಹಠಾತ್ ಪ್ರಾಣ ಕಳೆದುಕೊಳ್ಳುತ್ತಿರುವುದಕ್ಕೆ ಕಾರಣವಾ ಗಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು.

ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಪ್ರತಿಯೊಬ್ಬರೂ ತಕ್ಷಣ ತಪಾಸಣೆಗೆ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು, ಇಂತಹ ಅನಾರೋಗ್ಯ ಸ್ಥಿತಿ ಕಂಡುಬಂದರೆ ನಿರ್ಲಕ್ಷಿಸ ಬಾರದು ಎಂದು ಒತ್ತಾಯಿಸಿದ್ದರು.

ಹಠಾತ್ ಸಾವುಗಳು :

ಇತ್ತೀಚಿನ ದಿನಗಳಲ್ಲಿ ಯುವ ವಯಸ್ಸಿನಲ್ಲಿಯೇ ಹಠಾತ್ ಸಾವು ಸಂಭವಿಸುತ್ತಿದೆ. ಇದಕ್ಕೆ ಕಾರಣ ವೇನೆಂದು ಹಲವಾರು ಸಂಸ್ಥೆಗಳ ಮೂಲಕ ತನಿಖೆ ಮಾಡಲಾಗಿದೆ, ಈ ಅಧ್ಯಯನಗಳು ಕೋವಿಡ್-19 ಲಸಿಕೆ ಮತ್ತು ಹಠಾತ್ ಸಾವುಗಳ ವರದಿಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂದು ನಿರ್ಣಾಯಕ ವಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್-19 ಲಸಿಕೆ ಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸುತ್ತವೆ, ಗಂಭೀರ ಅಡ್ಡಪರಿಣಾಮಗಳು ಕಂಡುಬಂದ ಅತ್ಯಂತ ಅಪರೂಪದ ಪ್ರಕರಣಗಳಿವೆ ಎಂದು ಅದು ಹೇಳಿದೆ. ತಳಿಶಾಸ್ತ್ರ, ಜೀವನಶೈಲಿ, ಪರಿಸ್ಥಿತಿಗಳು ಮತ್ತು ಕೋವಿಡ್ ನಂತರದ ತೊಡಕುಗಳು ಸೇರಿದಂತೆ ಹಲವು ಕಾರಣಗಳಿಂದ ಹಠಾತ್ ಹೃದಯಾಘಾತದ ಸಾವುಗಳು ಉಂಟಾಗಬಹುದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕೋವಿಡ್ ಲಸಿಕೆ ಹಠಾತ್ ಸಾವುಗಳಿಗೆ ಕಾರಣ ಎಂಬುದು ಸುಳ್ಳು ಹೇಳಿಕೆಗಳಾಗಿದ್ದು, ಜನರನ್ನು ದಾರಿತಪ್ಪಿಸುತ್ತವೆ. ಇದಕ್ಕೆ ವೈಜನಿಕ ಆಧಾರಗಳಿಲ್ಲ. ನಿರ್ಣಾಯಕ ಪುರಾವೆಗಳಿಲ್ಲದ ಊಹಾಪೋಹದ ಹೇಳಿಕೆಗಳು ಸಾಂಕ್ರಾಮಿಕ ಸಮಯ ದಲ್ಲಿ ಲಕ್ಷಾಂತರ ಜೀವಗಳನ್ನು ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಲಸಿಕೆಗಳ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ದುರ್ಬಲಗೊಳಿಸುತ್ತವೆ ಎಂದಿದೆ.

Leave a Reply

Your email address will not be published. Required fields are marked *