
ಸೊರಬ :- ತಾಲೂಕಿನ ಉಳವಿ ಸಮೀಪದ ದೂಗೂರ ಬಳಿ ನಿನ್ನೆ ನಡೆದ ಕಾರು-ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲೂಕಿನ ಗೆಂಡ್ಲಾ ಹೊಸೂರು ಗ್ರಾಮದ ಸುನೀಲ್ (23) ಮೃತಪಟ್ಟ ಯುವಕನಾಗಿದ್ದಾನೆ. ಉಳವಿಯಿಂದ ಸಾಗರದ ಕಡೆ ತೆರಳುತ್ತಿದ್ದ ಕಾರು ಮತ್ತು ಸಾಗರದಿಂದ ಸೊರಬದ ಕಡೆ ತೆರಳುತ್ತಿದ್ದ ಬೈಕ್ ನಡುವೆ ದೂಗೂರಿನ ಈಶ್ವರ ದೇವಸ್ಥಾನದ ಬಳಿ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದನು.
ಕೂಡಲೆ ಸ್ಥಳೀಯರು ಆತನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾನೆ. ಸುನೀಲ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.