google.com, pub-9939191130407836, DIRECT, f08c47fec0942fa0

ಭದ್ರಾವತಿ :- ನಾಡಿನ ಜೀವನಾಡಿ ಭದ್ರಾ ಜಲಾಶಯ ಭರ್ತಿಯಾದರೆ ಮಾತ್ರ ರೈತರ ಜೀವನ ಸುಭದ್ರವಾಗಿರಲು ಸಾಧ್ಯ. ಅಚ್ಚುಕಟ್ಟು ರೈತರ ಹೃದಯ ಶ್ರೀಮಂತಿಕೆಯಿಂದ ಜಲಾಶಯ ತುಂಬಿದೆ. ಇಲ್ಲಿ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂದು ತಾಲೂಕಿನ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ, ರಾಜ್ಯ ಸರ್ಕಾರದ ೨ಕೋಟಿ ಅನುದಾನದಲ್ಲಿ ನಿರ್ಮಿಸಿದ ಪ್ರವಾಸಿ ಮಂದಿರವನ್ನು ಉದ್ಘಾಟಿಸಿದ ಬಳಿಕ ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ನೀರಾವರಿ ನಿಗಮದಿಂದ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಂತೋಷದಿಂದ ಬಂದಿದ್ದೇನೆ. ಐದು ಜಿಲ್ಲೆಗಳಿಗೆ ಭದ್ರೆಯು ವಿಸ್ತರಿಸಿದ್ದಾಳೆ. ರೈತರು ಯಾವುದೇ ಸರ್ಕಾರಿ ಸಂಬಳ ಪಡೆಯುವುದಿಲ್ಲ. ಅವರ ಏಳಿಗೆಗೆ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ ಎಂದರು.

ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳನ್ನು ದುರಸ್ಥಿಗೊಳಿಸುವಂತೆ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ೧೦೦ ಕೋಟಿ ಯೋಜನೆಯ ಪ್ರಸ್ತಾವ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಅವಕಾಶ ಸಿಕ್ಕಾಗ ಪುಣ್ಯದ ಕೆಲಸಗಳನ್ನು ಮಾಡಬೇಕು. ಇಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಜನಪರ ಕಾರ್ಯಗಳನ್ನು ಮಾಡುತ್ತಿದ್ದಾರೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಿವೆ. ರಾಜ್ಯದಲ್ಲಿ ೨೦೨೮ರಲ್ಲೂ ಕಾಂಗ್ರೆಸ್ ಆಡಳಿತಕ್ಕೆ ಬರಲಿದೆ. ಕಾಂಗ್ರೆಸ್ ಜನರ ನಂಬಿಕೆ ಉಳಿಸಿಕೊಳ್ಳುತ್ತದೆ ಎಂದರು.

Leave a Reply

Your email address will not be published. Required fields are marked *