google.com, pub-9939191130407836, DIRECT, f08c47fec0942fa0

ಸಾಗರ :- ಸಾಗರಕ್ಕೆ ಬೇರೆಬೇರೆ ಭಾಗದಿಂದ ಪ್ರವಾಸಿಗರು ಬರುತ್ತಾರೆ.  ಸರ್ಕಾರಿ ಬಸ್ ನಿಲ್ದಾಣವನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುತ್ತಿದ್ದು, ಡೆಲ್ಟಾ ಯೋಜನೆಯಡಿ 1 ಕೋಟಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನ 2 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಸದ್ಯದಲ್ಲಿಯೆ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ  ವಿವಿಧ ಅಭಿವೃದ್ದಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು. 

ಸಾಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ನಾನು ಶಾಸಕನಾಗಿದ್ದ ಸಂದರ್ಭದಲ್ಲಿಯೆ ಹಿಂದೆ ಲೋಕಾರ್ಪಣೆ ಮಾಡಲಾಗಿತ್ತು. ಅಂದಿನಿಂದ ಹೊಸ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಇದೀಗ ಪ್ರಯಾಣಿಕರ ನಿರೀಕ್ಷಣಾ ಕೊಠಡಿಗಳಿಗೆ ಮೇಲ್ಚಾವಣಿ, ಮುಖ್ಯ ಕಟ್ಟಡ ಹಾಗೂ ನೆಲಕ್ಕೆ ಗ್ರಾನೈಟ್, 8 ಬಸ್ ನಿಲ್ಲಿಸುವುದಕ್ಕೆ ಹೊಸದಾಗಿ 3 ಬಸ್ ನಿಲ್ಲಿಸಲು ಜಾಗ ವಿಸ್ತರಿಸುವುದು, ಸುಸಜ್ಜಿತ ಶೌಚಾಲಯ, ಶುದ್ದ ಕುಡಿಯುವ ನೀರಿನ ಘಟಕ, ಪಾರ್ಕಿಂಗ್ ವ್ಯವಸ್ಥೆ ವಿಸ್ತರಣೆ, ಉಪಹಾರ ಗೃಹ ನವೀಕರಣ, ಮಹಿಳೆಯರಿಗೆ ವಿಶ್ರಾಂತಿ ಗೃಹ, ರಾತ್ರಿ ಪಾಳಿಯಲ್ಲಿ ತಂಗುವ ನೌಕರರಿಗೆ 10 ಹಾಸಿಗೆ ಸಾಮಥ್ರ್ಯದ ವಿಶ್ರಾಂತಿ ಗೃಹ, ಮುಖ್ಯದ್ವಾರಕ್ಕೆ ಹೊಂದಿಕೊಂಡಂತೆ ಚತುಷ್ಪಥ ರಸ್ತೆ ನಿರ್ಮಿಸಿ ಮಧ್ಯ ಡಿವೈಡರ್, ವಿದ್ಯುದ್ದೀಪ ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಸಾಗರಕ್ಕೆ ಬೇರೆಬೇರೆ ಭಾಗದಿಂದ ಪ್ರವಾಸಿಗರು ಬರುತ್ತಾರೆ. ಬರುವ ಪ್ರವಾಸಿಗರಿಗೆ ನಮ್ಮ ಬಸ್ ನಿಲ್ದಾಣ ಸುಂದರವಾಗಿ ಕಾಣಬೇಕು. ಬಸ್ ನಿಲ್ದಾಣದ ಒಂದು ಭಾಗದಲ್ಲಿ ಡ್ರೈನೇಜ್ ನಿರ್ಮಾಣ ಮಾಡಲಾಗುತ್ತಿದೆ. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಅಭಿವೃದ್ದಿ ನಂತರ ರೈಲ್ವೆ ಸ್ಟೇಷನ್ ಮುಂಭಾಗದ ರಸ್ತೆಯನ್ನು ಅಭಿವೃದ್ದಿಪಡಿಸಲಾಗುತ್ತದೆ. ಸಾಗರದ ಹಳೆ ಬಸ್ ನಿಲ್ದಾಣದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಫುಡ್‍ಕೋರ್ಟ್ ಮಾಡಲು ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿಪೋ ಮ್ಯಾನೇಜರ್ ಬೀರಾದಾರ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಸುರೇಶಬಾಬು, ಕಲಸೆ ಚಂದ್ರಪ್ಪ, ಡಿ. ದಿನೇಶ್, ಮೋಹನ್, ವಿ.ಶಂಕರ್, ರಮೇಶ್ ಟಿ.ಪಿ. ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *