google.com, pub-9939191130407836, DIRECT, f08c47fec0942fa0

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಸಿದ್ಧರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಅವರು ನಮ್ಮ ಹೆಮ್ಮೆಯ ನಾಯಕ. ಅವರೊಂದಿಗೆ ನಾವಿದ್ದೇವೆ. ಇದು ಬಿಜೆಪಿಯವರ ಕುತಂತ್ರವಷ್ಟೇ. ಚುನಾಯಿತ ಸರ್ಕಾರವನ್ನು ಬೀಳಿಸುವ ಹುನ್ನಾರ ಇದರಲ್ಲಿ ಅಡಗಿದೆ. ಬಿಜೆಪಿಗರ ಷಡ್ಯಂತ್ರಕ್ಕೆ ನಾವು ಹೆದರವುದೂ ಇಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಸಿದ್ಧರಾಮಯ್ಯ ಅವರು ಅಪರಾಧಿ ಅಲ್ಲ. ತನಿಖೆ ಮಾಡಿ ಎಂದು ನ್ಯಾಯಾಲಯ ಹೇಳಿದೆ. ನೈತಿಕತೆ ಇಲ್ಲದ ಬಿಜೆಪಿಯವರು ಮುಖ್ಯಮಂತ್ರಿಗಳ ರಾಜೀನಾಮೆ ಕೇಳುತ್ತಿದ್ದಾರೆ. ಬಿಜೆಪಿಯ ನಾಲ್ವರು ಮುಖ್ಯಮಂತ್ರಿಗಳ ಪೈಕಿ ಮೂವರು ಆರೋಪ ಹೊತ್ತಿದ್ದಾರೆ. ಕೆಲವರು ಬೇಲ್ ಮೇಲೆ ಹೊರಗಿದ್ದಾರೆ. ಎಫ್‌ಐಆರ್ ಕೂಡ ಹಾಕಲಾಗಿದೆ. ಇಂತಹ ನೈತಿಕತೆ ಇಲ್ಲದವರು ನೈತಿಕ ಪಾಠ ಹೇಳುತ್ತಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಹೆಚ್.ಪಿ. ಗಿರೀಶ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಹೆಚ್.ಎಸ್. ಸುಂದರೇಶ್ , ಎಸ್.ಕೆ. ಮರಿಯಪ್ಪ, ಕಲಗೋಡು ರತ್ನಾಕರ್, ರಮೇಶ್ ಹೆಗ್ಡೆ, ಚಂದ್ರಭೂಪಾಲ್, ಜಿ.ಡಿ. ಮಂಜುನಾಥ್, ಎಸ್.ಪಿ. ಶೇಷಾದ್ರಿ, ವೈ.ಹೆಚ್. ನಾಗರಾಜ್. ಪಿ.ಎಸ್. ಗಿರೀಶ್ ರಾವ್, ಎಸ್.ಟಿ. ಚಂದ್ರಶೇಖರ್, ಬಿ.ಕೆ. ಮೋಹನ್, ಹೆಚ್.ಪಿ. ಗಿರೀಶ್, ಶರತ್ ಮರಿಯಪ್ಪ, ಕಲೀಂ ಪಾಶ, ಶಿವಕುಮಾರ್, ಯು. ಶಿವಾನಂದ್, ಮಧುಸೂದನ್, ಚೇತನ್ ಗೌಡ, ವಿಶ್ವನಾಥ್ ಕಾಶಿ, ಎಸ್. ಚಿನ್ನಪ್ಪ, ಶಿ.ಜು. ಪಾಶ, ಜಿ. ಪದ್ಮನಾಭ್, ಶಮೀನ್ ಭಾನು, ಅಫ್ರಿದಿ, ಸ್ಟೆಲಾ ಮಾರ್ಟಿನ್, ಯಮುನಾ ರಂಗೇಗೌಡ, ಸುವರ್ಣಾ ನಾಗರಾಜ್, ನಾಜೀಮಾ, ರೇಷ್ಮಾ, ವಿಜಯಲಕ್ಷ್ಮೀ, ಕವಿತಾ, ನಿತಿನ್, ಕುಮರೇಶ್, ಲೋಕೇಶ್, ರಾಜಶೇಖರ್ ಆರ್. ಸೇರಿದಂತೆ ಹಲವರಿದ್ದರು.

Leave a Reply

Your email address will not be published. Required fields are marked *