ಶಿವಮೊಗ್ಗ :- ವಾತ್ಸಲ್ಯ ಮರೆತ ಆಧುನಿಕ ಪ್ರಪಂಚದಲ್ಲಿ, ಉತ್ತಮ ವ್ಯಕ್ತಿತ್ವವುಳ್ಳ ವಿದ್ಯಾವಂತ ಸಮೂಹ ಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾ ಯಣ ರಾವ್ ಅಭಿಪ್ರಾಯಪಟ್ಟರು.
ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಸಿಎ ವಿಭಾಗದ ವತಿಯಿಂದ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿ ಸಿದ್ದ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮನ್ನು ಸಲುಹಿದ ಸಮಾಜಕ್ಕೆ ನಾವು ಸದಾ ಋಣಿಯಾಗಿರಬೇಕು. ಪ್ರಪಂಚಕ್ಕೆ ತರೆದುಕೊಳ್ಳುವಾಗ ಸಾಮಾಜಿಕ ಜವಾಬ್ದಾರಿ ಎಂಬುದು ಅತಿ ಮುಖ್ಯ. ತಾಯಿ ಇಂದಿನ ಅಗತ್ಯ ನೋಡಿದರೆ, ತಂದೆ ನಾಳೆಯ ಅಗತ್ಯತೆಯನ್ನು ನೋಡುತ್ತಾರೆ. ಓದು ಬರಹ ಕಲಿಸುವುದು ನಿಜವಾದ ವಿದ್ಯಾಭ್ಯಾಸವಲ್ಲ. ಬದಲಿಗೆ ವಿನಯ ವಿಧೇಯತೆ, ಹೃದಯವಂತಿಕೆ ಕಲಿಸುವುದು ನಿಜವಾದ ವಿದ್ಯಾಭ್ಯಾಸ ಎಂದರು.

ಸಂಪಾದನೆ ಎಂದರೆ ಹಣದ ಜೊತೆಗೆ ವಿಶ್ವಾಸ, ಸಂಸ್ಕಾರ, ಸಮಾ ಜದ ಕಳಕಳಿ ಎಲ್ಲವೂ ಸಂಪಾದನೆಯೆ ಆಗಿದೆ. ಮನುಷ್ಯನಲ್ಲಿ ಶ್ರೀಮಂತಿಕೆ ಎಂಬುದು, ಅರ್ಧ ಹಣದ ರೂಪದಲ್ಲಿ ನೀಡಿದರೆ, ಇನ್ನೂ ಅರ್ಧ ಗುಣದ ರೂಪದಲ್ಲಿ ಇರುತ್ತದೆ. ಕಳೆದು ಹೋದ ಸಮಯದ ಬಗ್ಗೆ ಚಿಂತಿಸುವುದಕ್ಕಿಂತ, ಉಳಿದಿರುವ ಸಮಯಕ್ಕೆ ಜೀವ ತುಂಬುವ ಕಾರ್ಯ ನಡೆಯಲಿ. ಮನಸ್ಸುಗಳನ್ನು ಒಡೆಯ ದಂತಹ ಸ್ನೇಹಿತರನ್ನು ಆರಿಸಿಕೊಳ್ಳಿ. ಕತ್ತಲೆಯು ಭಯ ಮೂಡಿಸಿದರೆ, ಬೆಳಕು ಭರವಸೆ ಮೂಡಿಸುತ್ತದೆ. ಸಮಾಜಕ್ಕೆ ಭರವಸೆ ಮೂಡಿಸುವ ವ್ಯಕ್ತಿತ್ವಗಳು ನೀವಾಗಿ ಎಂದು ಕರೆ ನೀಡಿದರು.
೧೮ ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಎನ್ಇ ಎಸ್ ಸಂಸ್ಥೆಯಲ್ಲಿ, ೧೦ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಧ್ಯ ಯನ ನಡೆಸುತ್ತಿರುವುದು ಸಂತಸದ ವಿಷಯವಾಗಿದೆ. ಮಾನವೀಯ ಮಲ್ಯಗಳನ್ನು ಬಿತ್ತುವ ಕಾರ್ಯವನ್ನು ಎನ್ಇಎಸ್ ಸಂಸ್ಥೆ ಸದಾ ಮಾಡುತ್ತಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಕಂಪ್ಯೂಟರ್ ಅಪ್ಲಿಕೇಶನ್ ಎಂಬುದು ದಿನನಿತ್ಯ ಬದಲಾಗುತ್ತಿರುವ ಪ್ರಚಲಿತ ವಿಚಾರವಾಗಿದೆ. ವರ್ತಮಾನದ ಚಿಂತನೆ ಎಂಬುದು, ಅಧ್ಯಯನಕ್ಕೆ ಬಹುದೊಡ್ಡ ಅವಶ್ಯಕತೆ. ಹೇಗೆ ಓದಬೇಕು ಎನ್ನುವ ಸ್ಪಷ್ಟತೆ ಇರಬೇಕು. ಎಂಸಿಎ ಎಂಬುದು ಪ್ರಾಯೋಗಿಕ ಆಧಾರಿತ ವಿಷಯ ವಾಗಿದೆ. ವಾಸ್ತವಿಕ ವಾಗಿ ಕೈಗಾರಿಕೆಗಳು ಎದುರಿಸುವ ಸವಾಲುಗಳನ್ನು ಪರಿಹರಿಸಲು, ನಿಮ್ಮ ಕೌಶಲ್ಯಗಳನ್ನು ಹೇಗೆ ಬಳಸಬಹುದು ಎಂಬುದು ಅರಿಯಿರಿ ಎಂದರು.
ಇದೇ ವೇಳೆ ಎಂಸಿಎ ವಿಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯೋಗಾಲಯ ಮತ್ತು ಸಭಾಂಗಣ ವನ್ನು ಅತಿಥಿಗಳು ಲೋಕಾರ್ಪಣೆ ಗೊಳಿಸಿದರು. ಎನ್ಇಎಸ್ ನಿರ್ದೇ ಶಕ ಟಿ.ಆರ್. ಅಶ್ವತ್ಥ ನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್, ಸಂಶೋಧನಾ ಡೀನ್ ಡಾ. ಎಸ್.ವಿ. ಙಸತ್ಯನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎ ವಿಭಾಗದ ಮುಖ್ಯಸ್ಥರಾದ ಡಾ. ಹೇಮಂತ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ರಾಘವೇಂದ್ರ ಸ್ವಾಗತಿಸಿ, ಆದರ್ಶ ಎಂ.ಜೆ. ವಂದಿಸಿದರು. ಅಮೃತ ನಿರೂಪಿಸಿ, ವಿದ್ಯಾರ್ಥಿನಿ ಶುಭಾನ್ವಿತ ಪ್ರಾರ್ಥಿಸಿದರು.