ಶಿವಮೊಗ್ಗ :- ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ಶಿವಮೊಗ್ಗ ನಗರ ಘಟಕದ ವತಿಯಿಂದ ಇಂದು ಶುಭ ಮಂಗಳ ಸಮುದಾಯ ಭವನದ ಆವರಣದಲ್ಲಿ ಪಡಿಪೂಜೆ ಮತ್ತು ಶಕ್ತಿಪೂಜೆ ಅದ್ದೂರಿಯಾಗಿ ಜರಗಿತು. ನೂರಾರು ಅಯ್ಯಪ್ಪ ಸ್ವಾಮಿ ಭಕ್ತರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಆದಿ ಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಶಬರಿಮಲೆ ಸನ್ನಿದಾನಕ್ಕೆ ಎರಡು ಲಾರಿಗೂ ಹೆಚ್ಚು ಅಕ್ಕಿ ಮತ್ತು ಇತರ ವಸ್ತುಗಳನ್ನು ಕಳುಹಿಸುತ್ತಿದ್ದು ಅದಕ್ಕೆ ಪೂಜೆ ಸಲ್ಲಿಸಲಾಯಿತು.
ಬಂದ ಭಕ್ತಾದಿಗಳೆಲ್ಲರಿಗೂ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ದಂಪತಿಗಳು ಮತ್ತು ಕೆ.ಈ. ಕಾಂತೇಶ್. ಸಂತೋಷ್ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಭಾಗವಹಿಸಿದ್ದರು.