google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಜಿಲ್ಲೆಯಲ್ಲಿ ಕಳೆದ 2 ವರ್ಷಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದ್ದು ಇದು ಪ್ರೇರಣೆ ನೀಡುವ ಜಾಗದ ಜೊತೆಗೆ ತಮ್ಮ ಅದೃಷ್ಟ ಎಂದು ಇಲ್ಲಿಂದ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಅವರು ಇಂದು ಮಾಧ್ಯಮದವರ ಜೊತೆ ಸ್ನೇಹಕೂಟದಲ್ಲಿ ಭಾಗವಹಿಸಿ ಅರಣ್ಯ ಸಂಬಂಧಿ ಸಮಸ್ಯೆಗಳು, ಕಂದಾಯ ದಾಖಲೆ ಸಮಸ್ಯೆ, ಭೂಸ್ವಾಧೀನ ಪ್ರಕ್ರಿಯೆ, ಶರಾವತಿ ಸಂತ್ರಸ್ಥರ ಸಮಸ್ಯೆಗಳು ಮೊದಲಾದ ಅತ್ಯಂತ ಸವಾಲಿನ ಕೆಲಸವುಳ್ಳ ಜಿಲ್ಲೆ ಶಿವಮೊಗ್ಗ ಆಗಿದ್ದು, ಇಲ್ಲಿ ಕೆಲಸ ನಿರ್ವಹಿಸಿ ಇಲ್ಲಿನ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಹೆಚ್ಚಿನ ಅಂಶಗಳನ್ನು ತಾವು ಕಲಿತಿದ್ದಾಗಿ ತಿಳಿಸಿದ ಅವರು, ಬಿ.ಹೆಚ್.ರಸ್ತೆಯ ಹೆದ್ದಾರಿಗೆ ಸಂಬಂಧಿಸಿದಂತೆ 30 ಜಾಗಗಳಲ್ಲಿ ಭೂ-ಸ್ವಾಧೀನ ಸಮಸ್ಯೆ ಬಗೆಹರಿಸಿದ ಸಮಾಧಾನ ತಮಗಿದೆ. ಶರಾವತಿ ಸಂತ್ರಸ್ಥರ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ಸಲ್ಲಿಸ ಲಾಗಿದೆ. ಇನ್ನು 8-10 ದಿನಗಳಲ್ಲಿ ಆ ಸಮಸ್ಯೆಗೆ ಒಂದು ಪರಿಹಾರ ಒದಗುವ ವಿಶ್ವಾಸವಿದೆ. ಹೊಸ ಜಿಲ್ಲಾಧಿಕಾರಿಗಳು ಅದರತ್ತ ಗಮನಹರಿಸುವರು ಎಂದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಹೇರಳ ಅವಕಾಶವಿದೆ. ಪರಿಸರ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ೬೦ಕ್ಕೂ ಹೆಚ್ಚಿನ ಪ್ರವಾಸಿ ಸ್ಥಳದಲ್ಲಿ ಪ್ರವಾಸಿಗರ ಆಕರ್ಷಣೆಗೆ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ವಿಶ್ವಪ್ರಸಿದ್ಧ ಜೋಗ ಜಲಪಾತದ ಅಭಿವೃದ್ಧಿಗೆ ಇದ್ದ ಅಡೆ-ತಡೆ ನಿವಾರಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರೊಂದಿಗೆ ತಾವು ಉತ್ತಮ ಸಂಬಂಧ ಹೊಂದಿದ್ದು, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಒಳ್ಳೆಯ ರೀತಿಯಲ್ಲಿ ಇರುವಂತೆ ನೋಡಿಕೊಂಡಿದ್ದೇನೆ ಎಂದರು.

ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ಸುಮಾರು ೮೦೦ ದೇವಾಲಯಗಳಿದ್ದು ೩೦೦ ದೇವಾಲಯಗಳ ಸರ್ವೇಕಾರ್ಯ ಪೂರ್ಣಗೊಳಿಸಿ, ಉಸ್ತುವಾರಿ ಸಮಿತಿ ರಚಿಸಲಾಗಿದೆ. ಶರಾವತಿ ಸಂತ್ರಸ್ಥರ ಬಗ್ಗೆ 9.136 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸಮೀಕ್ಷೆ ಮಾಡಲಾಗಿದೆ. ಸುಮಾರು 2ಸಾವಿರ ಅರ್ಜಿಗಳು ಬಂದಿದ್ದು, ಶರಾವತಿ ಸಂತ್ರಸ್ಥರ ಪಟ್ಟಿಯಿಂದ ಕೈಬಿಡಲಾಗಿದೆ ಎನ್ನಲಾಗಿದ್ದ 800 ಜನ ಸಂತ್ರಸ್ಥರು ಅರ್ಜಿ ಸಲ್ಲಿಸಿದ್ದು, ಅವರ ಅಹವಾಲುಗಳನ್ನು ಕೂಡ ಪಡೆದು ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 36ಸಾವಿರ ಎಕರೆ ಹಸಿರು ಅರಣ್ಯ ಇದೆ. ಡೀಮ್ಡ್ ಅರಣ್ಯದ ಕುರಿತು ಸಮೀಕ್ಷೆ ನಡೆಸಬೇಕಾಗಿದೆ ಎಂದರು.

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಇದ್ದರು.

Leave a Reply

Your email address will not be published. Required fields are marked *