
ಶಿವಮೊಗ್ಗ :- ನಾಡಹಬ್ಬ ದಸರಾ ಅಂಗವಾಗಿ ಇಂದು ನಗರದ ಶಿವಪ್ಪ ನಾಯಕ ವೃತ್ತದ ಬಳಿ ಆಯೋಜಿಸಲಾಗಿದ್ದ ಮಕ್ಕಳ ದಸರಾ ಜಥಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅವರು ಸ್ವಚ್ಛತೆಯ ಪ್ರತಿeಯನ್ನು ಸ್ವೀಕರಿಸಿ ಶಿವಮೊಗ್ಗ ನಗರದ ಐದು ಪ್ರಮುಖ ಸ್ಥಳಗಳಲ್ಲಿ ಹಮ್ಮಿಕೊಂಡಿರುವ ಗಾಂಧಿ ನಡೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗದ ಅನೇಕ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಹಾನಗರ ಪಾಲಿಕೆಯ ಪ್ರಮುಖರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.