google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿ ನಿಧಿಗಳಿಲ್ಲದೆ 2 ವರ್ಷ ಕಳೆದಿದ್ದು, ಕೂಡಲೇ ಪಾಲಿಕೆಗೆ ಚುನಾವಣೆ ನಡೆಸಬೇಕು, ಇಲ್ಲದಿದ್ದರೆ ರಾಷ್ಟ್ರಭಕ್ತ ಬಳಗದಿಂದ ಪ್ರಕರಣ ದಾಖಲಿಸಲಾಗವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಟಿ ಯಲ್ಲಿ ಮಾತನಾಡಿ, ರಾಜ್ಯ ಚುನಾವಣೆ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರು 2025 ಮೇ ನಲ್ಲಿ ಶಿವಮೊಗ್ಗಕ್ಕೆ ಬಂದಿದ್ದ ವೇಳೆ ರಾಷ್ಟ್ರ ಭಕ್ತರ ಬಳಗ ನಿಯೋಗ ಭೇಟಿಮಾಡಿ ಪಾಲಿಕೆಗೆ ಚುನಾವಣೆ ನಡೆಸುವಂತೆ ಮನವಿ ನೀಡಿತ್ತು. ಈ ವೇಳೆ ಮನವಿ ಸ್ವೀಕರಿಸಿದ ಚುನಾವಣಾ ಆಯುಕ್ತರು, ಶಿವಮೊಗ್ಗ ಮತದಾರರಪಟ್ಟಿ ಪರಿಷ್ಕರಣೆ ಪೋರ್ಣಗೊಂಡಿದ್ದು, ಸರ್ಕಾರದ ವತಿಯಿಂದ ವಾರ್ಡ್ ಮೀಸಲಾತಿಯ ಪರಿಷ್ಕೃತ ಪಟ್ಟಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದರು. ಆದರೆ ಇದೂವರೆಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿಲ್ಲ ಎಂದರು.

ಅವರ ಹೇಳಿಕೆಯಂತೆ ಅವಧಿ ಮುಗಿದ ಪಾಲಿಕೆಗಳ ಪರಿಷ್ಕೃತ ಕ್ಷೇತ್ರ ಹಾಗೂ ವಾರ್ಡ್ ಮೀಸಲಾತಿ ಅಧಿಸೂಚನೆ ಹೊರಡಿಸದೆ ಇದ್ದಾಗ ಸುಪ್ರೀಂ ಕೋರ್ಟ್ ಆದೇಶದಂತೆ ಹಿಂದಿನ ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಸಲು ಕೋರ್ಟ್ ಮೊರೆ ಹೋಗ ಬೇಕಾಗುತ್ತದೆ ಎಂದು ತಿಳಿಸಿದ್ದರು.

ಆದರೆ ಇದುವರೆಗೂ ರಾಜ್ಯ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿಲ್ಲ, ಅಲ್ಲದೆ ರಾಜ್ಯ ಚುನಾವಣಾ ಆಯೋಗವು ಕೂಡ ಈ ಸಂಬಂಧ ಯಾವುದೇ ಕ್ರಮಕೈಗೊಂಡಿಲ್ಲ. ಇದು ಪ್ರಜ ಪ್ರಭುತ್ವಕ್ಕೆ ಮಾಡಿದ ಅಪಮಾನ ಮತ್ತು ಕಗ್ಗೊಲೆ. ಅಲ್ಲದೆ ಸುಪ್ರೀಂ ಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ ಆಗಿದೆ. ಆದ್ದರಿಂದ ರಾಜ್ಯ ಸರ್ಕಾರ ಶೀಘ್ರವಾಗಿ ಪಾಲಿಕೆಯ ಪರಿಷ್ಕೃತ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತನೆ. ಹಾಗೂ ಕಾಲಮೀತಿಯೊಳಗೆ ಬಿಡುಗಡೆ ಮಾಡದಿದ್ದಲ್ಲಿ ಚುನಾವಣಾ ಆಯೋಗವು ನ್ಯಾಯಾಲಯದ ನಿರ್ದೇಶನದಂತೆ ಮಹಾನಗರ ಪಾಲಿಕೆಗಳ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಬೇಕೆಂದು ಒತ್ತಾಯಿಸಿದರು.

ನಿಗಧಿತ ಸಮಯದಲ್ಲಿ ಬೇಡಿಕೆ ಈಡೇರದಿದ್ದಲ್ಲಿ ರಾಷ್ಟ್ರ ಭಕ್ತರ ಬಳಗವು ಬಳಗದ ಮುಖಂಡರಾದ ಕೆ.ಈ.ಕಾಂತೇಶ್ ನೇತೃತ್ವದಲ್ಲಿ ಪಾಲಿಕೆಗೆ ತಕ್ಣ ಣ ಚುನಾವಣೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿ ಶಿವಮೊಗ್ಗದ ಜನತೆಗೆ ನ್ಯಾಯ ಕೊಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು. ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಕೆ.ಈ. ಕಾಂತೇಶ್, ಈ ವಿಶ್ವಾಸ್.ಮೋಹನ್ ಜದವ್, ಕುಬೇರಪ್ಪ, ಗೋವಿಂದ, ಶಂಕರ ನಾಯ್ಕ್, ಲೋಕೇಶ್ ಮತ್ತಿತರಿದ್ದರು.

Leave a Reply

Your email address will not be published. Required fields are marked *