ಶಿವಮೊಗ್ಗ :- ನಗರದಲ್ಲಿನ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್.ಸಿ. ಯೋಗೇಶ್ ನೇತೃತ್ವದಲ್ಲಿ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ರವರಿಗೆ ಮನವಿ ನೀಡಲಾಯಿತು.
ಶಿವಮೊಗ್ಗದಲ್ಲಿ ಸುಮಾರು ನಾಲ್ಕು ಲಕ್ಷ ಜನಸಂಖ್ಯೆಇದ್ದು, ಪೊಲೀಸ್ ಇಲಾಖೆಯವರು ಹಾಗೂ ಅಧಿಕಾರಿಗಳು ಶಿವಮೊಗ್ಗ ನಗರದ ಸಾರ್ವಜನಿಕರೊಂದಿಗೆ ಸಹಕರಿಸುತ್ತಾ ಬಂದಿದ್ದಾರೆ. ಶಿವಮೊಗ್ಗದಲ್ಲಿ ಕಮಿಷ ನರ್ ಕಚೇರಿ ನಿರ್ಮಾಣವಾಗಬೇಕು. ಗೋಪಾಳ ಭಾಗದಲ್ಲಿ ಮತ್ತು ಏರ್ಪೋರ್ಟ್‌ನಲ್ಲಿ ಪೊಲೀಸ್ ಸ್ಟೇಷನ್ ನಿರ್ಮಾಣ ಮಾಡಬೇಕು. ಇಲ್ಲಿ ಹೆಚ್ಚಿನ ವಾಹನ ದಟ್ಟಣೆಯಿದ್ದು ಇದರ ದೃಷ್ಟಿಯಿಂದ ಟ್ರಾಫಿಕ್ ಪೊಲೀಸ್ ಸ್ಟೇಷನ್‌ನ್ನು ಪ್ರತ್ಯೇಕವಾಗಿ ಗ್ರಾಮಾಂತರ ಭಾಗಕ್ಕೆ ಹಾಗೂ ನಗರ ಭಾಗದಲ್ಲಿ ಮತ್ತೊಂದು ಟ್ರಾಫಿಕ್ ಪೊಲೀಸ್ ಠಾಣೆ ನಿರ್ಮಾಣ ಮಾಡಿಕೊಡಬೇಕೆಂದು ಪೊಲೀಸ್ ಇಲಾಖೆಯವರಿಗೆ ಆರೋಗ್ಯ ದೃಷ್ಟಿಯಿಂದ ಪೊಲೀಸ್ ವ್ಯಾಯಾಮ ಶಾಲೆ ಹಾಗೂ ಕ್ರೀಡಾಂಗಣ ನಿರ್ಮಾಣ ಮಾಲು ಮನವಿಯಲ್ಲಿ ಒತ್ತಾಯಿಸಿದ್ದರೆ.
ಮನವಿ ಸಂದರ್ಭದಲ್ಲಿ ರಾಜ್ಯ ಭೋವಿ ನಿಗಮ ಮಂಡಳಿ ಅಧ್ಯಕ್ಷ ಎಸ್. ರವಿಕುಮಾರ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್ ಶಿವಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷಾ, ಮಾಜಿ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ರಂಗೇಗೌಡ, ಎಸ್. ಚಿನ್ನಪ್ಪ ಇನ್ನಿತರರಿದ್ದರು.